ಜೂನ್ 6 ರಿಂದ ‘ಮಾದೇವ ‘ತೆರೆಮೇಲೆ

Share

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಈ ಕುರಿತು ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಯಿಲ್ಲಿ ನಿರ್ದೇಶಕ ನವೀನ್ ರೆಡ್ಡಿ”ಮಾದೇವ” ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರ. ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ “ಹ್ಯಾಂಗ್ ಮ್ಯಾನ್” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಆ ಕಾಲಘಟ್ಟಕ್ಕೆ ಸರಿ ಹೊಂದುವ ಸ್ಥಳಗಳಲ್ಲೇ ಈ ಚಿತ್ರದ ಚಿತ್ರೀಕರಣವಾಗಿದೆ. ಸೋನಾಲ್ ಮೊಂತೆರೊ ನಾಯಕಿಯಾಗಿ ಅಭಿನಯಿಸಿದ್ದಾರೆ ಎಂದು ತಿಳಿಸಿದರು.

ವಿಶೇಷಪಾತ್ರದಲ್ಲಿ ಶ್ರೀನಗರ ಕಿಟ್ಟಿ ಹಾಗೂ ಅತಿಥಿಪಾತ್ರದಲ್ಲಿ ಮಾಲಾಶ್ರೀ ನಟಿಸಿದ್ದಾರೆ. ಶೃತಿ, ಅಚ್ಯುತಕುಮಾರ್, ಕಾಕ್ರೋಜ್ ಸುಧೀ, ಬಲ ರಾಜ್ವಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಸೋನಾಲ್ ಮೊಂತೆರೊ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ನಟಿಸಿದ್ದಾರೆ. ಮಾಲಾಶ್ರೀ, ಶೃತಿ, ಅಚ್ಯುತ ಕುಮಾರ್, ಕಾಕ್ರೋಜ್ ಸುಧೀ, ಮೈಕೋ ನಾಗರಾಜ್, ಬಲ ರಾಜ್ವಾಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಡಿಫರೆಂಟ್ ಡ್ಯಾನಿ, ರಿಯಲ್ ಸತೀಶ್,‌ ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ,‌ ಬಾಲಕೃಷ್ಣ ತೋಟ ಛಾಯಾಗ್ರಹಣ, ವಿಜಯ್ ಎಂ ಕುಮಾರ್ ಸಂಕಲನ ಹಾಗು ಗುಣ ಅವರ ಕಲಾ ನಿರ್ದೇಶನವಿರುವ ಈ ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಿ

ಈ ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಪಾರ್ವತಿ. ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ವಿನೋದ್ ಪ್ರಭಾಕರ್ ಅವರು ಹೇಳಿದ ಹಾಗೆ “ರಾಬರ್ಟ್” ಚಿತ್ರದ ನಂತರ ನಾನು ಹಾಗೂ ಅವರು ಈ ಚಿತ್ರದಲ್ಲಿ ಅಭಿನಯಿಸಿದ್ದೇವೆ ಎಂದು ನಾಯಕಿ ಸೋನಾಲ್ ಮೊಂತೆರೊ ತಿಳಿಸಿದರು.

ನಮ್ಮ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಕೇಶವ್ ಆರ್(ದೇವಸಂದ್ರ). ನಟ ಕಾಕ್ರೋಜ್ ಸುಧೀ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಸಂಗೀತ ನಿರ್ದೇಶಕ ಪ್ರದ್ಯೋತನ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು. ಚಿತ್ರತಂಡದ ಅನೇಕ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Girl in a jacket
error: Content is protected !!