ಬೆಂಗಳೂರು, ಸೆ, 11-ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಹಾಗೂ ಬಿ.ಸರೋಜಾ ದೇವಿ ಅವರಿಗೆ ಮರಣೀತ್ತರ ಕರ್ನಾಟಕ ರತ್ನ ಒ್ರಶಸ್ತಿ ನೀಡಲುವಸರ್ಕಾರ ನಿರ್ದರಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಯಲ್ಲಿ ಈ ನಿರ್ದಾರ ತಗೆದುಕೊಳ್ಳಲಾಗಿದೆ ಎಂದು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.
ನಟ ವಿಷ್ಣು ವರ್ಧನ್ ಅವರಿಗೆ ಹಾಗೂ ನಟಿ ಬಿ,ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಇದೇ ವೇಳೆ ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.