ಬೆಂಗಳೂರು,ನ, ೩: ಅಕಾಲಿಕ ಮರಣಕ್ಕೆ ತುತ್ತಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಲು ಕನ್ನಡ ಚಿತ್ರೋದ್ಯಮ ನವೆಂಬರ್ ೧೬ ರಂದು ‘ಪುನೀತ್ ನಮನ’ ಕಾರ್ಯಕ್ರಮವನ್ನು ಆಯೋಜಿಸಿದೆ.
ಸ್ಯಾಂಡಲ್ ವುಡ್ ವತಿಯಿಂದ ನವೆಂಬರ್ ೧೬ ರಂದು ೩ ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ್ ನಮನ ಕಾರ್ಯಕ್ರಮ ನಡೆಯಲಿದ್ದು, ಅಂದು ಸ್ಯಾಂಡಲ್ ವುಡ್ ನಟರು, ಕಲಾವಿದರು, ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ನಟ ಅಪ್ಪು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.
ಆದರೆ ಈಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅವಕಾಶವಿಲ್ಲ ಕೇವಲ ವಿಐಪಿಗಳಿಗೆ ಮಾತ್ರ ಅವಕಾಶವಿದೆ.
ಇಂದಿನಿಂದ ಪುನೀತ್ ರಾಜ್ ಕುಮಾರ್ ಅವರ ಸಮಾಧಿ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ಅಪ್ಪು ಅಭಿಮಾನಿಗಳು ಸರತಿ ಸಾಲಿನಲ್ಲಿ ಬಂದು ನಮನ ಸಲ್ಲಿಸುತ್ತಿದ್ದಾರೆ.