ಫೈಟರ್ ನಿರ್ಮಾಪಕರ ಚಿತ್ರಕ್ಕೆ ಚಿಕ್ಕಣ್ಣ ಹೀರೋ

Share

ಫೈಟರ್ ನಿರ್ಮಾಪಕರ ಚಿತ್ರಕ್ಕೆ ಚಿಕ್ಕಣ್ಣ ಹೀರೋ

by-ಕೆಂಧೂಳಿ

ಕಳೆದ ವರ್ಷದ ಸೂಪರ್ ಹಿಟ್ ಸಿನಿಮಾಗಳ ಪೈಕಿ ‘ಉಪಾಧ್ಯಕ್ಷ’ ಕೂಡ ಒಂದು. ಚಿಕ್ಕಣ್ಣ ನಾಯಕನಟರಾಗಿ ನಟಿಸಿದ್ದ ಈ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಕಮಾಲ್ ಮಾಡಿತ್ತು. ಅದಾದ ಬಳಿಕ ಸಖತ್ ಚ್ಯೂಸಿಯಾಗಿರುವ ಚಿಕ್ಕಣ್ಣ, ಸಾಕಷ್ಟು ಸ್ಕ್ರಿಪ್ಟ್‌ಗಳನ್ನು ಕೇಳಿ ಕೆಲವೊಂದನ್ನು ಮಾತ್ರ ಫೈನಲ್ ಮಾಡಿದ್ದಾರೆ.

ಸದ್ಯ ಲಕ್ಷ್ಮಿ ಪುತ್ರ ಸಿನಿಮಾದಲ್ಲಿ ತೊಡಗಿಸಿಕೊಂಡಿರುವ ಚಿಕ್ಕಣ್ಣ, ಅದಾದ ಬಳಿಕ ಮತ್ತೊಂದು ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈವರೆಗೂ ಮಾಡಿರದ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿರುವ ಅವರು, ವಿಭಿನ್ನ ಕಥಾಹಂದರದ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿನೋದ್ ಪ್ರಭಾಕರ್ ನಟನೆಯ ಫೈಟರ್ ಚಿತ್ರವನ್ನು ನಿರ್ಮಿಸಿದ್ದ ಸೋಮಶೇಖರ್ ಕಟ್ಟಿಗೇನಹಳ್ಳಿ ಅವರ ನಿರ್ಮಾಣದಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ.

ಆಕಾಶ್ ಎಂಟರ್‌ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಅದ್ಧೂರಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಸೋಮಶೇಖರ್ ಕಟ್ಟಿಗೇನಹಳ್ಳಿ ಬಂಡವಾಳ ಹೂಡುತ್ತಿದ್ದಾರೆ. ಸದ್ಯ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿದ್ದು, ಸದ್ಯದಲ್ಲೇ ಸಿನಿಮಾ ಸೆಟ್ಟೇರಲಿದೆ. ಉಳಿದ ತಾರಾಗಣ ಹಾಗೂ ತಾಂತ್ರಿಕ ಬಳಗದ ಮಾಹಿತಿಯನ್ನು ಶೀಘ್ರದಲ್ಲೇ ಚಿತ್ರತಂಡ ಹಂಚಿಕೊಳ್ಳಲಿದೆ.

Girl in a jacket
error: Content is protected !!