ಭೂತಾಯಿ ಮಡಿಲು ಸೇರಿದ ಸಂಚಾರಿ ವಿಜಯ್

Share

ಚಿಕ್ಕಮಗಳೂರು,ಜೂ,೧೫: ಬೈಕ್‌ನಲ್ಲಿ ಬಿದ್ದು ಅಫಘಾತಕ್ಕೀಡಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ನಟ ಸಂಚಾರಿ ವಿಜಯ್ ಅವರ ಅಂತ್ಯ ಕ್ರಿಯೇ ಇಂದು ಅವರ ಸ್ವಗ್ರಾಮದಲ್ಲಿ ನೆರವೇರಿತು.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿರುವ ವಿಜಯ್ ಬಾಲ್ಯದ ಸ್ನೇಹಿತ ರಘು ಅವರ ತೋಟದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಿತು. ಕಪ್ಪೂರು ಶ್ರೀಗಳ ನೇತೃತ್ವದಲ್ಲಿ ವಿಜಯ್ ಸಹೋದರನಿಂದ ಅಂತಿಮ ವಿಧಿ-ವಿಧಾನಗಳನ್ನು ನಡೆಸಲಾಯಿತು. ಅಂತ್ಯಕ್ರಿಯೆ ಮೊದಲು ಪೊಲೀಸರು ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು.


ಫಿಲಂ ಚೇಂಬರ್ ಬೆಂಗಳೂರಿನಲ್ಲೇ ಅಂತ್ಯಸಂಸ್ಕಾರ ಮಾಡುವುದಾಗಿ ಹೇಳಿತ್ತು. ಆದರೆ ಚಿಕ್ಕಂದಿನಲ್ಲೇ ಅಪ್ಪ-ಅಮ್ಮನನ್ನ ಕಳೆದುಕೊಂಡರೂ ಗ್ರಾಮದಲ್ಲೇ ಬೆಳೆದು ರಾಷ್ಟ್ರ ಪ್ರಶಸ್ತಿ ಗಳಿಸಿ ಮನೆ ಮಗನ ಅಂತ್ಯಸಂಸ್ಕಾರ ಗ್ರಾಮದಲ್ಲೇ ಆಗಬೇಕೆಂದು ಸ್ಥಳೀಯರು ಪಟ್ಟು ಹಿಡಿದಿದ್ದರು. ಹಾಗಾಗಿ ಗ್ರಾಮದಲ್ಲೇ ಅಂತ್ಯಸಂಸ್ಕಾರ ನಡೆಸಲಾಯಿತು. ವಿಜಯ್ ಮೃತದೇಹ ಸ್ವ-ಗ್ರಾಮಕ್ಕೆ ತೆರಳುತ್ತಿದ್ದಂತೆಯೇ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳು ಕಿಕ್ಕಿರಿದು ನೆರೆದರು. ನಟನ ಅಂತಿಮ ದರ್ಶನಕ್ಕೆ ಜನಸಾಗರ ನೆರೆದಿದ್ದರಿಂದ ಪೊಲಿಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಯಿತು.
ಇದಕ್ಕೂ ಮುನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಮುಂಭಾಗದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು ಈ ವೇಳೆ ಹಿರಿಯ-ಕಿರಿಯ ಬಹುತೇಕ ಕಲಾವಿದರು ಅವರ ಅಂತಿಮ ದರ್ಶನ ಪಡೆದರು. ನಂತರ ೧೦ ಗಂಟೆಗೆ ನೇರವಾಗಿ ಅವರ ಸ್ವಗೃಹಕ್ಕೆ ಅಲ್ಲಂದ ತೆರಳಿತು.

Girl in a jacket
error: Content is protected !!