ಸಂಜನಾ -ರಾಗಿಣಿ ಡ್ರಗ್ಸ್ ಸೇವನೆ ದೃಢ

Share

ನಟಿಯರಾದ ಸಂಜನಾ, ರಾಗಿಣಿ ಡ್ರಗ್ಸ್ ಸೇವಿಸಿರುವುದು ಎಫ್‌ಎಸ್‌ಎಲ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ವಿರೇನ್ ಖನ್ನಾ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ತೋನ್ಸೆ ಡ್ರಗ್ಸ್ ಸೇವಿಸಿರುವುದು ಎಫ್‌ಎಸ್‌ಎ ಪರೀಕ್ಷೆಯಲ್ಲಿ ದೃಡಪಟ್ಟಿದೆ.
ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ತಲೆ ಕೂದಲನ್ನು ೨೦೨೦ರ ಅಕ್ಟೋಬರ್‌ನಲ್ಲಿ ಹೈದರಾಬಾದ್‌ನ ಈSಐಗೆ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರ ವರದಿ ಈಗ ಸಿಸಿಬಿ ಪೊಲೀಸರ ಕೈಸೇರಿದೆ. ಸದರಿ ರಿಪೋರ್ಟ್‌ನಲ್ಲಿ ಇಬ್ಬರೂ ನಟಿಯರು ಡ್ರಗ್ಸ್ ಸೇವಿಸಿದ್ದರು ಎನ್ನುವುದು ದೃಢಪಟ್ಟಿದ್ದು, ಜತೆಗೆ ವಿರೇನ್ ಖನ್ನಾ ಕೂಡ ಡ್ರಗ್ಸ್ ಸೇವಿಸಿರುವುದು ಖಚಿತವಾಗಿದೆ.

ಸಂಜನಾ ಗಲ್ರಾನಿ, ರಾಗಿಣಿ ತಲೆ ಕೂದಲನ್ನು ೨೦೨೦ರ ಅಕ್ಟೋಬರ್‌ನಲ್ಲಿ ಪರೀಕ್ಷೆಗೆ ಕಳುಹಿಸಲಾಗಿತ್ತು.ಬರೋಬ್ಬರಿ ೧೦ ತಿಂಗಳ ಬಳಿಕ ಎಫ್‌ಎಸ್‌ಎಲ್ ರಿಪೋರ್ಟ್ ಬಂದಿದ್ದು, ಸದ್ಯ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟಿಮಣಿಯರಾದ ರಾಗಿಣಿ,ಸಂಜನಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೀಗಾಗಿ ಮುಂದೆ ಏನೆಲ್ಲಾ ಬೆಳವಣಿಗೆಗಳು ನಡೆಯಲಿವೆ ಎನ್ನುವುದು ಕುತೂಹಲ ಮೂಡಿಸಿದೆ.

ಡ್ರಗ್ಸ್ ಕೇಸ್‌ನಲ್ಲಿ ಬಂಧಿತರಾಗಿದ್ದ ಸಂಜನಾ, ರಾಗಿಣಿ ಒಮ್ಮೆ ಹೇರ್ ಸ್ಯಾಂಪಲ್ ನೀಡಲು ನಿರಾಕರಿಸುತ್ತಿದ್ದರು. ಹಾಗಾಗಿ, ಸಿಸಿಬಿ ಅಧಿಕಾರಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ನಂತರ ಸಿಸಿಬಿ ಅಧಿಕಾರಿಗಳ ಮನವಿಗೆ ನ್ಯಾಯಾಲಯ ಒಪ್ಪಿಗೆ ಸೂಚಿಸಿದ ಕಾರಣ ತಲೆಗೂದಲ ಸ್ಯಾಂಪಲ್ ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು.

ಈ ಕುರಿತು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿಕೆ ನೀಡಿದ್ದು, ಸಾಮಾನ್ಯವಾಗಿ ಡ್ರಗ್ಸ್ ಪ್ರಕರಣದಲ್ಲಿ ರಕ್ತ ಮತ್ತು ಮೂತ್ರವನ್ನು ಪರೀಕ್ಷೆಗೆ ಕಳುಹಿಸಲಾಗುತ್ತದೆ. ಆದರೆ ಅದರಲ್ಲಿ ಡ್ರಗ್ಸ್ ಸೇವಿಸಿ ಒಂದೆರಡು ದಿನದೊಳಗೆ ಪರೀಕ್ಷೆ ಮಾಡಿದರೆ ಮಾತ್ರ ಪಾಸಿಟಿವ್ ಬರುತ್ತದೆ. ಆದ್ದರಿಂದ ಆರೋಪಿಗಳ ಕೂದಲನ್ನು ಕಳೆದ ವರ್ಷ ಹೈದರಾಬಾದ್ ಟೆಸ್ಟ್ಗಾಗಿ ಕಳುಹಿಸಲಾಗಿತ್ತು. ಈಗ ಅದರಲ್ಲಿ ಪಾಸಿಟಿವ್ ಬಂದಿದೆ ಎಂದು ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

Girl in a jacket
error: Content is protected !!