ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ

Share

ಬೆಂಗಳೂರು,ಜೂ,೦೬: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ ೬೬ ವರ್ಷ ವಯಸ್ಸಾಗಿತ್ತು.
ಡಾ. ರಾಜ್‌ಕುಮಾರ್ ಸೇರಿದಂತೆ ಅನೇಕ ಸ್ಟಾರ್ ನಟರ ಜೊತೆ ನಟಿಸುವ ಮೂಲಕ ಜನಪ್ರಿಯರಾಗಿದ್ದ ಅವರು ಹಲವು ವರ್ಷಗಳ ಕಾಲ ಚಂದನವನದಲ್ಲಿ ಸಕ್ರಿಯರಾಗಿದ್ದರು. ನಿನ್ನೆ ರಾತ್ರಿ(ಜೂ.೦೫) ಅವರು ಹೃದಯಾಘಾತವಾಗಿzತು ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳದಿದ್ದಾರೆ.
ಸುರೇಖಾ ಭರತನಾಟ್ಯ ಮತ್ತು ಕೂಚುಪುಡಿ ನೃತ್ಯ ಕಲಾವಿದೆ ಆಗಿದ್ದರು. ಹಲವು ದೇಶಗಳಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಅವರಿಗೆ ಅಪಾರ ಅಭಿಮಾನಿಗಳಿದ್ದರು. ಡಾ. ರಾಜ್‌ಕುಮಾರ್ ಅವರ ಹಲವಾರು ಸಿನಿಮಾಗಳಲ್ಲಿ ಸುರೇಖಾ ನಟಿಸಿದ್ದರು. ೧೫೦ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸುರೇಖಾ ಅಭಿನಯಿಸಿದ್ದರು. ಮಾಯಾ ಮನುಷ್ಯ, ನಾನು ಬಾಳಬೇಕು, ನಾನು ಅವನಿಲ್ಲೈ ಮುಂತಾದ ಸಿನಿಮಾಗಳಲ್ಲಿ ಅವರು ನಾಯಕಿ ಆಗಿದ್ದರು
ಆಪರೇಷನ್ ಜಾಕ್ ಪಾಟ್‌ನಲ್ಲಿ ಸಿಐಡಿ ೯೯೯, ತ್ರಿಮೂರ್ತಿ, ಒಲವು ಗೆಲುವು, ಗಿರಿ ಕನ್ಯೆ, ಸಾಕ್ಷಾತ್ಕಾರ, ಕಸ್ತೂರಿ ನಿವಾಸ, ಹುಲಿಯ ಹಾಲಿನ ಮೇವು ಮುಂತಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದರು. ಶಿವಕನ್ಯೆ, ಕಾವೇರಿ, ಕೆಸರಿನ ಕಮಲ, ಬ್ಯಾಂಕರ್ ಮಾರ್ಗಯ್ಯ, ಆಲೆಮನೆ, ನಾಗರಹೊಳೆ, ತಾಯಿ ದೇವರು, ಭಕ್ತ ಸಿರಿಯಾಳ ಮುಂತಾದ ಚಿತ್ರಗಳಲ್ಲಿ ಸುರೇಖಾ ಮುಖ್ಯಭೂಮಿಕೆ ನಿಭಾಯಿಸಿದ್ದರು.

Girl in a jacket
error: Content is protected !!