ಲೂಸ್ ಮಾದ ಎಂದೆ ಖ್ಯಾತಿಪಡೆದಿರುವ ನಟ ಯೋಗೇಶ್ ಅವರಿಗೆ ಕೆಲ ದಿನಗಳಿಂದ ಸಿನಿಮಾಗಳು ವಿರಳವಾಗಿದ್ದವು ಈಗ‘ ಲಂಕೆ ಚಿತ್ರದ ಮೂಲಕ ತೆರೆಗೆ ಬರಲು ಸಜ್ಜಾಗಿದ್ದಾರೆ.
ಜುಲೈ ೬ರಂದು ಯೋಗಿ ಅವರ ಜನ್ಮದಿನ. ಇದೇ ಸಂದರ್ಭದಲ್ಲಿ ಚಿತ್ರದ ಮೋಷನ್ ಪೋಸ್ಟರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ. ಸಾಹಸ ಪ್ರಧಾನವಾದ ಈ ಚಿತ್ರವನ್ನು ರಾಮ್ ಪ್ರಸಾದ್ ಎಂ.ಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ರಾಮ್ ಪ್ರಸಾದ್ ಹಾಗೂ ಗುರುರಾಜ ದೇಸಾಯಿ ಸಂಭಾಷಣೆ ಬರೆದಿದ್ದಾರೆ.
ದಿ ಗ್ರೇಟ್ ಎಂಟರ್‌ಟೈನರ್ ಲಾಂಛನದಲ್ಲಿ ಪಟೇಲ್ ಶ್ರೀನಿವಾಸ್ ಹಾಗೂ ಸುರೇಖ ರಾಮಪ್ರಸಾದ್ ಅವರು ನಿರ್ಮಿಸಿರುವ ಈ ಚಿತ್ರ ಲಾಕ್‌ಡೌನ್ ಮುಗಿದು, ಚಿತ್ರಮಂದಿರ ಆರಂಭಕ್ಕೆ ಅನುಮತಿ ದೊರಕಿದ ನಂತರದಲ್ಲಿ ತೆರೆಗೆ ಬರಲು ಸಜ್ಜಾಗಿದೆಕಾರ್ತಿಕ್ ಶರ್ಮಾ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳು ಹಾಗೂ ಎರಡು ಬಿಟ್ಸ್‌ಗಳಿವೆ. ರಮೇಶ್ ಬಾಬು ಛಾಯಾಗ್ರಹಣ, ಶಿವರಾಜ್ ಮೇಹು ಸಂಕಲನ, ರವಿವರ್ಮ, ಪಳನಿರಾಜ್, ಅಶೋಕ್ ಸಾಹಸ ನಿರ್ದೇಶನ ಹಾಗೂ ಧನಂಜಯ್, ಮೋಹನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಇತ್ತೀಚೆಗೆ ನಿಧನರಾದ ಸಂಚಾರಿ ವಿಜಯ್ ಅವರೂ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಕೃಷಿ ತಾಪಂಡ, ಕಾವ್ಯ ಶೆಟ್ಟಿ, ಶರತ್ ಲೋಹಿತಾಶ್ವ, ಶೋಭ್‌ರಾಜ್, ಡ್ಯಾನಿ ಕುಟ್ಟಪ್ಪ, ಸುಚೇಂದ್ರ ಪ್ರಸಾದ್, ವಾಣಿಶ್ರೀ, ಗಾಯಿತ್ರಿ ಜಯರಾಂ, ಎಸ್ಟರ್ ನರೋನ, ಪ್ರಶಾಂತ್ ಸಿದ್ದಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಲೂಸ್ ಮಾದನ ‘ಲಂಕೆ’ ಪ್ರವೇಶ
Share