“S/O ಮುತ್ತಣ್ಣ” ಚಿತ್ರಕ್ಕಾಗಿ “ಕಮ್ಮಂಗಿ ನನ್ ಮಗನೇ” ಹಾಡು ಹಾಡಿದ ನಟ ಶರಣ್

Share

ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಗೀತೆಗಳನ್ನು ನೀಡಿರುವ ನಿರ್ದೇಶಕ ಹಾಗೂ ಗೀತರಚನೆಕಾರ ಯೋಗರಾಜ್ ಭಟ್, ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಮತ್ತೊಂದು ಅದ್ಭುತ ಗೀತೆ ಬರೆದಿದ್ದಾರೆ.

“ಕಮ್ಮಂಗಿ ನನ್ ಮಗನೇ” ಎಂಬ ಹಾಡನ್ನು ಯೋಗರಾಜ್ ಭಟ್ ಅವರು ಬರೆದಿದ್ದು, ತಮ್ಮ ವಿಶಿಷ್ಟ ಕಂಠದಿಂದ ಜನಪ್ರಿಯರಾಗಿರುವ ಸ್ಯಾಂಡಲ್ ವುಡ್ ಅಧ್ಯಕ್ಷ ನಟ ಶರಣ್ ಹಾಗೂ ಸಂಗೀತ ನಿರ್ದೇಶಕ ನಾದಗಾರುಡಿಗ ವಿ.ಹರಿಕೃಷ್ಣ ಮಧುರವಾಗಿ ಹಾಡಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನೀಡಿದ್ದಾರೆ. ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಜನಪ್ರಿಯ ಗಾಯಕ ಸಂಚಿತ್ ಹೆಗ್ಡೆ ಕೂಡ “s/o ಮುತ್ತಣ್ಣ” ಚಿತ್ರದ ಹಾಡು ಹಾಡಿದ್ದು, ಹೆಸರಾಂತ ಗಾಯಕಿ ದೀಪ್ತಿ ಸುರೇಶ್ ಇದೇ ಮೊದಲ ಬಾರಿಗೆ ಈ ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ.

ಪ್ರಸ್ತುತ ನಟ ಶರಣ್ ಹಾಗೂ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಅವರು ಸಹ “ಕಮ್ಮಂಗಿ ನನ್ ಮಗನೇ” ಹಾಡನ್ನು ಹಾಡಿದ್ದಾರೆ. ಪ್ರಸಿದ್ಧ ಗಾಯಕ – ಗಾಯಕಿಯರ ಕಂಠಸಿರಿಯಲ್ಲಿ ಈ ಚಿತ್ರದ ಎಲ್ಲಾ ಹಾಡುಗಳು ಸೂಪರ್ ಹಿಟ್ ಆಗಲಿದೆ ಎಂಬ ಭರವಸೆ ಚಿತ್ರತಂಡದ್ದು. ಚಿತ್ರದ ಮೊದಲ ಗೀತೆಯಾಗಿ “ಕಮ್ಮಂಗಿ ನನ್ ಮಗನೇ” ಹಾಡು ಮೇ 17 ರಂದು ಬಿಡುಗಡೆಯಾಗಲಿದೆ.

ತಂದೆ – ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಬೆಂಗಳೂರು ಕುಮಾರ್ ವಿತರಣೆ ಮಾಡಲಿದ್ದಾರೆ.ಪುರಾತನ ಫಿಲಂಸ್ ನಿರ್ಮಾಣ ಮಾಡಿರುತ್ತಾರೆ ಇವರಿಗೆ ಎಸ್ ಅರ್ ಕೆ ಫಿಲಂಸ್ ಸಾಥ್ ನೀಡಿದೆ‌. ಪ್ರಣಂ ದೇವರಾಜ್ ಅವರಿಗೆ ನಾಯಕಿಯಾಗಿ “ದಿಯಾ” ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ, ಸಂದೀಪ ಎಂ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.

Girl in a jacket
error: Content is protected !!