ಆಂಧ್ರಪ್ರದೇಶದಲ್ಲಿ ಬೆಂಗಳೂರು ಮೂಲದ ಬಿಜೆಪಿ ಮುಖಂಡರ ಬರ್ಭರ ಹತ್ಯೆ

Share

ಬೆಂಗಳೂರು ,ಜು,23-ಬಿಜೆಪಿ ಮುಖಂಡರಾದ ತಂದೆ- ಮಗನನ್ನು ಅಪಹರಿಸಿ ಕತ್ತು ಸೀಳಿ ಆಂದ್ರಪ್ರದೇಶದ  ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ.

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದ ತಂದೆ ವೀರಸ್ವಾಮಿರೆಡ್ಡಿ ಹಾಗೂ ಅವರ ಪುತ್ರ ಪ್ರಶಾಂತ್ ರೆಡ್ಡಿಯನ್ನು ಅಪಹರಿಸಿದ ದುಷ್ಕರ್ಮಿಗಳು ಇಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆಯಾದ ಘಟನೆ ನಡೆದಿದೆ.

ಕೊಲೆಯಾದ ತಂದೆ ಮಕ್ಕಳು ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಾಗಿದ್ದರು. ವೀರಸ್ವಾಮಿ ರೆಡ್ಡಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದು ಪ್ರಶಾಂತ್ ರೆಡ್ಡಿ ಮಹದೇವಪುರ ಬಿಜೆಪಿಯ ಯುವ ಮೋರ್ಚದ ಅಧ್ಯಕ್ಷರಾಗಿದ್ದಾರೆ. ಬೆಂಗಳೂರಿನಲ್ಲಿ ಪ್ರಶಾಂತ್ ಮತ್ತು ವೀರಸ್ವಾಮಿರೆಡ್ಡಿ ಇಬ್ಬರೂ ಮಾರ್ವಲ್ ಬಿಲ್ಡರ್ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿ ಮೇಲೆ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.

ಇದಕ್ಕೆ ಪ್ರತಿಯಾಗಿ ಆಂಧ್ರದಲ್ಲಿ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿ ಇವರಿಬ್ಬರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ನಿನ್ನೆ ಆಂಧ್ರಕ್ಕೆ ತೆರಳಿದ್ದು ಇಂದು ಮಧ್ಯಾಹ್ನ 12 ಗಂಟೆಗೆ ಕೋರ್ಟ್ ಮುಂದೆ ಹಾಜರಾಗಿದ್ದರು. ಈ ವೇಳೆ ಮಾಧವರೆಡ್ಡಿ ಮತ್ತು ಅನಿಲ್ ರೆಡ್ಡಿ ರಾಜಿ ಮಾಡಿಕೊಳ್ಳುವುದಾಗಿ ವೀರಸ್ವಾಮಿ ಮತ್ತು ಪ್ರಶಾಂತ್ ರೆಡ್ಡಿಯನ್ನು ಕರೆಸಿ ತಮ್ಮ ಸ್ಕಾರ್ಪಿಯೋ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ್ದಾರೆ. ನಂತರ ಅವರಿಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಹೆದ್ದಾರಿಯಲ್ಲೇ ಎಸೆದು ಹೋಗಿದ್ದಾರೆ.

ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಕಾರ್ಯ ಮುಂದುವರೆಸಿದ್ದಾರೆ.

Girl in a jacket
error: Content is protected !!