ಗುಂಡು ಹಾರಿಸಿ ಕುಂಟುಂಬದ ಮೂವರ ಕೊಲೆ-ತಾನೂ ಆತ್ಮಹತ್ಯೆ
by-ಕೆಂಧೂಳಿ
ಬಾಳೆಹೊನ್ನೂರು,ಏ,೦೨– ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ನಡೆದಿದೆ.
ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಅತ್ತೆ ಜ್ಯೋತಿ(೫೦), ಮಗಳು ಮೌಲ್ಯ(೬) ಮತ್ತೆ ನಾದಿನಿ ಸಿಂಧು(೨೪) ಗುಂಡು ತಗುಲಿ ಮೃತಪಟ್ಟಿದ್ದಾರೆ. ನಾದಿನಿಯ ಗಂಡನ ಕಾಲಿಗೆ ಗುಂಡು ತಗಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರತ್ನಾಕರ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ರಾತ್ರಿ ೧೦ ಗಂಟೆ ಸುಮಾರಿನಲ್ಲಿ ಈ ಕೃತ್ಯ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಗುಂಡು ಹಾರಿಸುವ ಮುನ್ನ ರತ್ನಾಕರ ವಿಡಿಯೊ ಒಂದನ್ನು ಹರಿಬಿಟ್ಟಿದ್ದು, ‘ಕುಟುಂಬದವರು ನನಗೆ ಮೋಸ ಮಾಡಿದ್ದಾರೆ. ಎರಡು ವರ್ಷದಿಂದ ಪತ್ನಿ ನನ್ನನ್ನು ಬಿಟ್ಟು ಹೋಗಿದ್ದಾಳೆ’ ಎಂದು ಹೇ