ಮೈಸೂರು ಚಾಮುಂಡಿಬೆಟ್ಟದ ತಪ್ಪಲಲ್ಲಿ ಯುವತಿ ಮೇಲೆ ಸಾಮೂಹಿಕ‌ ಅತ್ಯಾಚಾರ

Share

ಮೈಸೂರು,ಆ,25: ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಸಂಜೆ ಘಟನೆ ಸಂಭವಿಸಿದೆ.
ಹಾಡಹಗಲೇ ಯುವಕನಿಗೆ ಗುಂಡು ಹಾರಿಸಿ ಜ್ಯುವೆಲ್ಲರಿ ಶಾಪ್ ದರೋಡೆ, ಯುವತಿಗೆ ಚಾಕುವಿನಿಂದ ಇರಿತ ಪ್ರಕರಣಗಳು ಮಾಸುವ ಮುನ್ನವೇ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಚಾಮುಂಡಿ ಬೆಟ್ಟಕ್ಕೆ ಯುವತಿಯು ತನ್ನ ಪ್ರಿಯಕರನ ಜೊತೆ ತೆರಳಿದ್ದಳು. ಅವರಿಬ್ಬರು ಬೈಕ್​ನಲ್ಲಿ ವಾಪಸ್ ಬರುವಾಗ ಲಲಿತಾದ್ರಿಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಮದ್ಯಪಾನ ಮಾಡುತ್ತಿದ್ದ ನಾಲ್ಕೈದು ಜನರ ಗುಂಪೊಂದು ಇವರನ್ನ ತಡೆದು, ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.ಯುವತಿ ಹಾಗೂ ಆಕೆಯ ಪ್ರಿಯಕರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳು ಯಾರು? ಹೊರಗಿನಿಂದ ಬಂದವರಾ? ಯಾಕೆ ಲಲಿತಾದ್ರಿಪುರ ಬೆಟ್ಟಕ್ಕೆ ಬಂದಿದ್ದರು ಎಂಬಿತ್ಯಾದಿ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.ಘಟನೆ ಮಾಹಿತಿ ಪಡೆದು ಡಿಸಿಪಿ ಪ್ರದೀಪ್ ಗುಂಟೆ, ಆಲನಹಳ್ಳಿ ಪೊಲೀಸ್ ಇನ್ಸ್​ಪೆಕ್ಟರ್ ಹಾಗೂ ಬೆರಳಚ್ಚು ತಂಡವು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಈ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Girl in a jacket
error: Content is protected !!