ಆನೇಕಲ್,ಜೂ,೧೭: ಗ್ರಾಮಪಂಚಾಯಿತ ಸದಸ್ಯನೊಬ್ಬ ಯುವತಿಯನ್ನು ಮನೆಗೆ ಕರೆಸಿಕೊಂಡು ಆಕೆಗೆ ಗನ್ ತೋರಿಸಿ ಅತ್ಯಚರವೆಸಗಿದ ಘಟನೆ ಬನ್ನೇರುಘಟ್ಟ ಸಮೀಪದ ಶಾನಬೋಗನ ಹಳ್ಳಿಯಲ್ಲಿ ಜರುಗಿದೆ.
ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷಾಅತ್ಯಾಚಾರ ಮಾಡಿದ್ದು ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ಫೇಸ್ಬುಕ್ನಲ್ಲಿ ಯುವತಿಯ ಪರಿಚಯವಾಗಿದ್ದು ಆಕೆಗೆ ಮಾಡಲಿಂಗ್ ಕ್ಷೇತ್ರದಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ಮೂಡಿಸಿದ್ದ.
ಹೆಬ್ಬಾಳ ಮೂಲದ ಆ ಯುವತಿಗೆತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಲಾಕ್ಡೌನ್ ಹಿನ್ನೆಲೆ ಬಡವರಿಗೆ ಆಹಾರ್ ಕಿಟ್ ವಿತರಣೆ ಮಾಡುತ್ತಿರುವ ಫೋಟೋಗಳನ್ನೂ ಆಕೆಗೆ ವಾಟ್ಸಪ್ ಮೂಲಕ ಕಳುಹಿಸಿ ತಾನೊಬ್ಬ ಸಭ್ಯಸ್ಥ, ಪರೋಪಕಾರಿ ಎಂದು ಹೇಳಿ ವಿಶ್ವಾಸ ಗಿಟ್ಟಿಸಿಕೊಂಡಿದ್ದ.
ಸೋಮವಾರ ಅಹಮದ್ ಪಾಷಾ ನಿನಗೆ ಕೆಲಸ ಕೊಡಿಸುತ್ತೇನೆ. ಮಾತನಾಡಬೇಕಿದೆ ನನ್ನ ಮನೆಗೆ ಬಾ ಎಂದು ತನ್ನ ಚಾಲಕನ ಮೂಲಕ ಓಲಾಕ್ಯಾಬ್ ಬುಕ್ ಮಾಡಿಸಿ ಶಾನಭೋಗನಹಳ್ಳಿಯ ತನ್ನ ಮನೆಗೆ ಯುವತಿಯನ್ನು ಕರೆಸಿಕೊಂಡಿದ್ದ. ಮನೆಗೆ ಬಂದ ಯುವತಿ ಮೇಲೆ ಅಹಮದ್ ಪಾಷಾ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಇದಕ್ಕೆ ವಿರೋಧಿಸಿದ ಯುವತಿಗೆ ಗನ್ ತೋರಿಸಿ ಬೆದರಿಸಿದ್ದಾನೆ. ಅಲ್ಲದೆ, ಆಕೆಯ ನಗ್ನ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿಯೂ ಹೆದರಿಸಿದ್ದಾನೆ ಎಂದು ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಅಹಮದ್ ಪಾಷ, ಇದೇ ರೀತಿ ಸುಮಾರು ೧೦ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ತಲೆಮರೆಸಿಕೊಂಡಿರುವ ಅಹಮದ್ ಪಾಷಾ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಪ್ ಮೂಲಕ ಕಳುಹಿಸಿ ತಾನೊಬ್ಬ ಸಭ್ಯಸ್ಥ, ಪರೋಪಕಾರಿ ಎಂದು ಹೇಳಿ ವಿಶ್ವಾಸ ಗಿಟ್ಟಿಸಿಕೊಂಡಿದ್ದ.