ಮಂಗಳೂರು,ಮೇ,02-ರೌಡಿಶೀಟರ್ ಸುಹಾಸ್ ಹತ್ಯೆ ಈಗ ಮಂಗಳೂರಿನಲ್ಲಿ ಮತ್ತೊಂದು ಆಯಾಮ ಪಡೆದುಕೊಂಡಿದ್ದು ಹಿಂದು ಸಂಘಟನೆ ಮತ್ತು ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.
ಹತ್ಯೆಯಾದ ಸುಹಾಸ್ ಶೆಟ್ಟಿ 2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮತ್ತು ರೌಡಿಶೀಟರ್ ಕೂಡ ಈತನ ಪರ ಈಗ ವಕಾಲತ್ತು ವಹಿಸುವ ಮೂಲಕ ಮತ್ತೊಂದು ಸಂಘರ್ಷಕ್ಕೆ ನಿಂತಂತಾಗಿದೆ.
ಸುಹಾಸ್ ಶೆಟ್ಟಿಯನ್ನುಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದರು ಮತ್ತು ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು.
ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದರು.
ಇದೀಗ ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿದೆ. ಸುಹಾಸ್ ಹತ್ಯೆ ವಿಷಯ ತಿಳಿಯುತ್ತಿದ್ದಂತೆಯೇ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ರಾಜಕಾರಣಿಗಳು ಈ ಹತ್ಯೆಯನ್ನು ಖಂಡಿಸಿ …ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ದೂರಿದ್ದಾರೆ.
ಇನ್ನು ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದರು,ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿದ್ದು, ‘ಈ ಘಟನೆ ರಾತ್ರಿ 8.27 ರ ಸುಮಾರಿಗೆ ನಡೆದಿದೆ. ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಮತ್ತು ಶಶಾಂಕ್ ಅವರೊಂದಿಗೆ ಕೆಎ-12-ಎಂಬಿ-3731 ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸುಹಾಶ್ ಶೆಟ್ಟಿ ಅವರನ್ನು ಸ್ವಿಫ್ಟ್ ಕಾರು ಮತ್ತು ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದುಷ್ಕರ್ಮಿಗಳ ಗುಂಪು ಅಡ್ಡಗಟ್ಟಿದೆ. 5 ರಿಂದ 6 ಜನರಿದ್ದ ದುಷ್ಕರ್ಮಿಗಳು ಸುಹಾಶ್ ಶೆಟ್ಟಿ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಗಂಭೀರ ಗಾಯಗಳನ್ನುಂಟುಮಾಡಿದರು. ಅವರನ್ನು ತಕ್ಷಣ ಎಜೆ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದರು. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಂಗಳೂರು ಹಲವೆಡೆ ನಾಕಾಬಂದಿ ಹಾಕಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಇಡೀ ಗಸ್ತು ತಿರುಗಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದು, ಮಂಗಳೂರು ನಗರಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾಕಂದ್ರೆ ಕೊಲೆಯಾದ ಸುಹಾಸ್ ಸ್ಥಳೀಯವಾಗಿ ಸಾಕಷ್ಟು ಕಾರ್ಯಕರ್ತರ ಪಡೆಯನ್ನು ಹೊಂದಿದ್ದ. ಹೀಗಾಗಿ ಪೊಲೀಸರು ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದಾರೆ.