Girl in a jacket

Daily Archives: May 13, 2021

ಗೃಹ ಸಚಿವ ಬೊಮ್ಮಾಯಿ ನಿವಾಸ ಕೋವಿಡ್ ಆರೈಕೆ ಕೇಂದ್ರ

ಶಿಗ್ಗಾವಿ,ಮೇ,13: ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿಯಲ್ಲಿರುವ ತಮ್ಮ ಮನೆಯ ಆವರಣವನ್ನು ಈಗ ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಿದ್ದಾರೆ. ಶಿಗ್ಗಾವಿ ಕ್ಷೇತ್ರದ ಕೋವಿಡ್ ಸೋಂಕಿತರ ಜೀವ ರಕ್ಷಣೆಗೆ ಬೊಮ್ಮಾಯಿ ಪಣ ತೊಟ್ಟಿದ್ದಾರೆ. ಸೋಂಕು ಕಾಣಿಸಿಕೊಂಡ ವ್ಯಕ್ತಿಗೆ ಪ್ರಾಥಮಿಕ ವೈದ್ಯೋಪಚಾರ ಒದಗಿಸಲು ಶಿಗ್ಗಾವಿಯಲ್ಲಿ ಇರುವ ತಮ್ಮ ಮನೆಯನ್ನು ಕೋವಿಡ್ ಅರೈಕೆ ಕೇಂದ್ರವನ್ನಾಗಿ ಪರಿವರ್ತಿಸಿದ್ದಾರೆ. ಚಿಕಿತ್ಸೆ ನೀಡಲು ವೈದ್ಯರನ್ನು ನಿಯೋಜಿಸಲಾಗಿದೆ. 50 ಹಾಸಿಗೆ ಗಳನ್ನು ಇಲ್ಲಿ ಅಳವಡಿಸಲಾಗಿದೆ. ಈ ಸ್ಥಳಕ್ಕೆ…

ನಿರೀಕ್ಷೆಗಳ ಹುಸಿಗೊಳಿಸಿದ ಸಿಎಂ

ಬೆಂಗಳೂರು, ಮೇ,13:ಮುಖ್ಯಮಂತ್ರಿ ಸುದ್ದಿಗೋಷ್ಠಿ ಕರೆದಿದ್ದಾರೆ ಎಂದರೆ ಬಹುತೇಕ ಸಾಕಷ್ಟು ನಿರೀಕ್ಷೆಗಳಿದ್ದವು ಕೋವಿಡ್ ಸಂಕಷ್ಟದಲ್ಲಿ ಲಾಕ್ ಡೌನ್ ಮಾಡಿದ ಈ ಹೊತ್ತಲ್ಲಿ ಏನಾದರೂ ಆರ್ಥಿಕ ಪ್ಯಾಕೇಜ್ ಪ್ರಕಟಿಸುತ್ತಾರೆ ಎನ್ನುವ ಎಲ್ಲಾ ಆಸೆಗಳಿಗೂ ತಣ್ಣೀರೆರಚಿದ್ದಾರೆ. ಕನಿಷ್ಠ ಜನರ ಬಗ್ಗೆ ಅನುಕಂಪವೂ ಇಲ್ಲದ ಬಿ.ಎಸ್ ಯಡಿಯೂರಪ್ಪ ಜನರ ಸಮಸ್ಯೆಗಳ ಬಗ್ಗೆ ಸೌಜನ್ಯಕ್ಕೂ ಪ್ರಸ್ತಾಪ ಮಾಡದ ಅವರು ಕಠಿಣ ಕ್ರಮದಿಂದ ಕೊರೊನಾ ಸೋಂಕಿತರ ಪ್ರಮಾಣ ಇಳಿಮುಖವಾಗಿದೆ ಎಂದು ಹೇಳಿದರು. ಇನ್ನೂ 18 ವರ್ಷದ ಮೇಲಿನ ಎಲ್ಲಾ ವಯೋಮಾನದವರಿಗೂ ವ್ಯಾಕ್ಸಿನ್ ಹಾಕಲಾಗುತ್ಯದೆ ಎಂದು…

ಎಸ್ಎಸ್ಎಲ್ ಸಿ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು,ಮೇ,13:ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ…

ಚಾಮರಾಜನಗರದಲ್ಲಿ ಸಾವನ್ನಪ್ಪಿದವರು 24 ಅಲ್ಲ 36

ಬೆಂಗಳೂರು,ಮೇ,13: ಚಾಮರಾಜನಗರ ಆಸ್ಪತರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರು24 ಮಂದಿಯಲ್ಲ 36 ಮಂದಿ ಎಂದು ಸಮಿತಿ ಹೈಕೋರ್ಟ್ ಗೆ ವರದಿ ಸಲ್ಲಿಸಿದೆ. ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಮೇ 2ರ ರಾತ್ರಿ 10.30ರಿಂದ ತಡರಾತ್ರಿ 2.30ರವರೆಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಈ 4 ಗಂಟೆಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ ಆಕ್ಸಿಜನ್ ಇರಲಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆಡಿಟ್ ವರದಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಮೆದುಳಿನ ಆಘಾತದಿಂದ 7 ರೋಗಿಗಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ…

ನ್ಯಾಯಾಧೀಶರು ಸರ್ವಜ್ಞರಲ್ಲ- ಸಿ.ಟಿ.ರವಿ

ಬೆಂಗಳೂರು,ಮೇ,13: ಲಸಿಕೆ ನೋಡಿಕೆ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ಹೈಕೋರ್ಟ್ ತರಾಟೆಗೆ ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಮತ್ತು ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನ ಹೈಕೋರ್ಟ್ ತರಾಟೆ ತೆಗೆದುಕೊಂಡಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನ್ಯಾಯಾಧೀಶರು ಸರ್ವಜ್ಞರಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.Υ ಗುರುವಾರ ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ತಜ್ಞರ ಸಮಿತಿ ನೀಡುವ ವರದಿಯನ್ನು ಆಧರಿಸಿಯೇ ಕೆಲಸ ಮಾಡುತ್ತದೆ ಕೇಂದ್ರ ಸರ್ಕಾರ ಹೇಳಿದೆ. ಇದನ್ನ ಸುಪ್ರೀಂಕೋರ್ಟ್ ಕೂಡ ಒಪ್ಪಿದೆ ಎಂದು ತಿಳಿಸಿದರು…

ಆಕ್ಸಿಜನ್ ಟ್ಯಾಂಕರ್ ಖರೀದಿ;ನಿರಾಣಿ ಕಾರ್ಯಕ್ಕೆ ಕಟೀಲು ಮೆಚ್ಚುಗೆ

ಬೆಂಗಳೂರು,ಮೇ,13: ಆಮ್ಲಜನಕ ಟ್ಯಾಂಕರ್ ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್) ಅಡಿಯಲ್ಲಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಅವಕಾಶ ನೀಡಿದ್ದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಂಡಿಎಫ್ ಅಡಿಯಲ್ಲಿ ಆಕ್ಸಿಜನ್ ಸಂಗ್ರಹಿಸಲು ಅಗತ್ಯವಾದ ಆಮ್ಲಜನಕ ಟ್ಯಾಂಕರ್ ಖರೀದಿಸಲು ಮತ್ತು ಅದನ್ನು ಜಿಲ್ಲೆಯ ಆಸ್ಪತ್ರೆಗಳಿಗೆ ಸಾಗಿಸಲು ಕೋವಿಡ್ -19 ಗೆ ಚಿಕಿತ್ಸೆ ನೀಡಲು ಸಚಿವ…

ಬಿಜೆಪಿ ಸರ್ಕಾರದ ಡಬಲ್ ಇಂಜಿನ್ ನಿಂತುಹೋಗಿದೆ; ಡಿ.ಕೆ.ಶಿ

ಬೆಂಗಳೂರು,ಮೇ,೧೩:’ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್ ಗಳು ಕೆಟ್ಟು ನಿಂತಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ’ಚಾಮರಾಜನಗರದಲ್ಲಿ ೨೪ ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು ಹೈಕೋರ್ಟ್ ನೇಮಕ ಮಾಡಿದ್ದ ನ್ಯಾಯಮೂರ್ತಿಗಳ ಸಮಿತಿ ಈಗಾಗಲೇ…

ಪತ್ರಕರ್ತ ಜಯತೀರ್ಥ ಕಾಗಲಕರ್ ಕೊವಿಡ್ ಗೆ ಬಲಿ

ಕಲಬುರಗಿ ,13: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿ ಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಕೊರೊನೊ ಸೊಂಕಿಗೆ ಬಲಿಯಾಗಿದ್ದಾರೆ.ವಾರದ ಹಿಂದೆ ಕೊರೊನೊ ಸೊಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆ ಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಗೆ ಸ್ಪಂದಿಸದೇ ಕೊನೆಯುಸಿರೆಳೆದರು.ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಾ  ಇತ್ತೀಚಿಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು. ಮೂರು ದಶಕಗಳಿಂದ ಹಲವು ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದ್ದ ಕಾಗಲಕರ್…

ಲಸಿಕೆ ನೀಡುವಲ್ಲಿ ವಿಫಲ-ಸರ್ಕಾರದ ವಿರುದ್ಧ ತರಾಟೆಗೆ ತಗೆದುಕೊಂಡ ಕೋರ್ಟ್

ಬೆಂಗಳೂರು, ಮೇ. ೧೩: ರಾಜ್ಯದ ಜನತೆಗೆ ಲಸಿಕೆ ನೀಡುವ ವಿಚಾರದಲ್ಲಿ ಸರ್ಕಾರದ ವಿರುದ್ಧ ಹೈಕೋರ್ಟ್ ತರಾಟೆಗೆ ತಗೆದುಕೊಂಡಿದೆ. ಜನರು ಕೊರೊನಾ ಎರಡನೇ ಅಲೆಗೆ ತತ್ತರಿಸಿದ್ದಾರೆ ಅವರಿಗೆ ವ್ಯಾಕ್ಸಿನ್ ಕೊಡಲು ನಿಮಗೆ ಆಗುತ್ತಿಲ್ಲ ಎಂದರೆ ಹೇಗೆ? ೩೧ ಲಕ್ಷ ಮಂದಿಗೆ ಯಾವಾಗ ಎರಡನೇ ಡೋಸ್ ನೀಡುತ್ತೀರಾ ನಿಮಗೆ ಸಾಧ್ಯವಿಲ್ಲ ಎಂದಾದರೆ ಹಾಗೆಯೇ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಲಾಗುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹೈಕೊರ್ಟ್ ಚಾಟಿ ಏಟು ಬೀಸಿದೆ. ೫ ವರ್ಷ ಮೇಲ್ಪಟ್ಟವರಿಗೆ ೨ನೇ ಡೋಸ್ ನ ಲಸಿಕೆ ಕೊರತೆಯಾಗಿರುವ…

ಜನನಿ ಜನ್ಮಭೂಮಿ

ವಿಶಾಲಾ ಆರಾಧ್ಯ ರಾಜಾಪುರ ಈ ತಿಂಗಳ ಮಾರ್ಚ್ ಎರಡನೇ ಭಾನುವಾರದಂದು ವಿಶ್ವ ಅಮ್ಮಂದಿರ ದಿನವನ್ನು ಆಚರಿಸಿದೆವು. ತಮ್ಮ ತಮ್ಮ ಅಮ್ಮಂದಿರನ್ನು ಮಾತನಾಡಿಸಿಯೋ ಫೋಟೋ ಕ್ಲಿಕ್ಕಿಸಿಯೋ ಎಲ್ಲರೂ ಅಮ್ಮನ ಫೋಟೋವನ್ನು ನಮ್ಮ ನಮ್ಮ ಸ್ಟೇಟಸ್ ಗಳಲ್ಲಿ ವಿಜೃಂಭಿಸಿದೆವು. ನಂತರ ಅಮ್ಮನ ಬಗ್ಗೆ ಯೋಚಿಸಿ ಅವಳೊಡನಿದ್ದು ಅವರ ಭಾವನೆಗಳು, ವಿಚಾರಗಳ ಆಗುಹೋಗುಗಳನ್ನು ನಾವು ಸರಿಯಾಗಿ ವಿಚಾರಿಸುತ್ತೇವೆಯೇ? ಎಂಬ ಸ್ವ ವಿಮರ್ಶೆ ಮಾಡಿಕೊಳ್ಳೋಣ. ನಮ್ಮ ಹುಟ್ಟಿಗೂಮುನ್ನವೇ ಜೀವಾಂಕುರವಾದಾಗಿನಿಂದ ನಮ್ಮನ್ನು ತನ್ನ ಹೊಟ್ಟೆಯಲ್ಲಿ ಪೊರೆದವಳನ್ನು ಅಲ್ಲಿಂದಲೇ ಕಾಲುಗಳನ್ನು ಚಾಚಿ ಒದೆಯಲು ಶುರುಮಾಡುತ್ತೇವೆ. ಅದು…

ಚಾಮರಾಜನಗರದಲ್ಲಿ ೨೪ ಮಂದಿ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ

ಬೆಂಗಳೂರು,ಮೇ೧೩: ಚಾಮರಾಜ ನಗರದಲ್ಲಿ ಮೇ ೨ ರ ರಾತ್ರಿ ೨೪ ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ವರದಿ ನೀಡಿದೆ. ಮೇ ೨ ರ ಮಧ್ಯೆ ರಾತ್ರಿ ಚಾಮರಾಜನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ೨೪ ಮಂದಿ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದ್ದರು ಆದರೆ ಅದು ಆಮ್ಲಜನಕದ ಕೊರತೆಯಿಮದಲ್ಲ ಕೇವಲ ೪ ಮಂದಿ ಮಾತ್ರ ಆಮ್ಲಜನಕ ಕೊರತೆಯಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದರು. ಇದು ಹಲವಾರು ವಿವಾದಕ್ಕೆ ಕಾರಣವಾಗಿತ್ತು…

Girl in a jacket