ಗ್ರಾಮೀಣ ಪ್ರದೇಶದತ್ತ ಹೆಚ್ಚು ಗಮನಹರಿಸುವಂತೆ ಡಿಸಿಗಳಿಗೆ ಸಿಎಂ ಸೂಚನೆ
ಬೆಂಗಳೂರು,ಮೇ17:ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ,ಹೆಚ್ಚು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್ ಸೋಂಕು ನಿಯಂತ್ರಣ ಸಂಬಂಧಿಸಿದಂತೆ ಸಿಎಂ ಎಲ್ಲಾ ಜಿಲ್ಲಾಧಿಕಾರಿಗಳ,ಜಿಲ್ಲಾ ವರಿಷ್ಟಾಧಿಕಾರಿಗಳ ಸಭೆ ನಡೆಸಿದರು.ಈ ವೇಳೆ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್ವೈ, ರಾಜ್ಯದಲ್ಲಿ ಕಪ್ಪು ಶಿಲೀಂಧ್ರ ಸಮಸ್ಯೆ ಉಲ್ಬಣವಾಗುತ್ತಿದೆ. ಅದರ ಮೇಲೂ ತೀವ್ರ ನಿಗಾ ವಹಿಸುವಂತೆ ಸೂಚನೆ ನೀಡಿದರು. ಬ್ಲ್ಯಾಕ್…