ಎರಡನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಪಿಣರಾಯಿ
ತಿರುವನಂತಪುರಂ, ಮೇ 20: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ಪಕ್ಷ ಭರ್ಜರಿ ಗೆಲುವು ಸಾಧಿಸಿದ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ರಚನೆ ಆಗಿದ್ದು ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ಕೇಂದ್ರ ಕ್ರೀಡಾಂಗಣದಲ್ಲಿ ನಡೆಯಲಿರುವ ಪಿಣರಾಯಿ ವಿಜಯನ್ ಪ್ರಮಾಣವಚನ ಕಾರ್ಯಕ್ರಮದಲ್ಲಿ 500 ಮಂದಿ ಭಾಗವಹಿಸುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಿಎಂ ಜೊತೆಗೆ 20 ಶಾಸಕರು ರಾಜ್ಯ ಸಂಪುಟ ಸಚಿವರಾಗಿ ಪದಗ್ರಹಣ ಮಾಡಿದರು. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮಾರ್ಗಸೂಚಿ ಹಿನ್ನೆಲೆ ನಿಗದಿತ ಪ್ರಮಾಣದ ಸದಸ್ಯರಿಗೆ ಮಾತ್ರ ಪ್ರಮಾಣವಚನ…