ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ
ಬೆಂಗಳೂರು, ಮೇ 21: ಕೊರೊನಾ ಸೋಂಕಿತ ಪ್ರಕರಣಗಳು ಮತ್ತಷ್ಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 14 ಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸಲಾಗಿದೆ. ಸುದ್ದಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ತಜ್ಞರ ನೀಡಿರುವ ಮಾಹಿತಿ ಆದರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದ ಅವರು, ಲಾಕ್‌ಡೌನ್ ಜೂನ್ 7ರ ಬೆಳಗಿನ ಜಾವ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ ಎಂದರು. ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯಾದ್ಯಂತ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ದಿನಾಂಕ 24.ರಿಂದ ಜೂನ್ 7ರ ಬೆಳಿಗ್ಗೆ 6 ಗಂಟೆಯವರೆಗೆ…