ಸರ್ಕಾರಿ ಶಾಲಾ ಮಕ್ಕಳಿಗೆ ಸ್ಮಾರ್ಟ್ ಫೋನ್ ನೀಡಲು ಚಿಂತನೆ; ಸುರೇಶ್ ಕುಮಾರ್
ಮೈಸೂರು,ಮೇ24: ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣವಂಚಿತರಾಗಬಾರದು ಹಾಗಾಗಿ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೂ ಉಚಿತ ಸ್ಮಾರ್ಟ್ ಫೋನು ನೀಡುವ ಕುರಿತು ಚಿಂತನೆ ನಡೆದಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಮೈಸೂರಿನ ಡಿಡಿಪಿಐ ಕಚೇರಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ‘ಸ್ಮಾರ್ಟ್‌ಫೋನ್ ವಿತರಣೆ ಸಂಬಂಧ ಈಗಾಗಲೇ ಎಲ್ಲ ಶೈಕ್ಷಣಿಕ ಜಿಲ್ಲೆಯಲ್ಲೂ ಸರ್ವೇ ನಡೆಸಲಾಗಿದೆ’ ಎಂದು ಹೇಳಿದರು. ‘ಹಳ್ಳಿಗಳ ಬಡ ವಿದ್ಯಾರ್ಥಿಗಳು ಆನ್‌ಲೈನ್ ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣ ವಂಚಿತ…