ಕೊರೊನಾ ಸೋಂಕಿಗೆ ಹೆತ್ತವರ ಕಳೆದುಕೊಂಡ ಅನಾಥ ಮಕ್ಕಳಿಗೆ ತಕ್ಷಣ ಪರಿಹಾರ ನೀಡಲು ಸುಪ್ರೀಂ ಸೂಚನೆ
ನವದೆಹಲಿ,ಮೇ,28:ಕೊರೊನಾ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಅನಾಥವಾಗಿರುವ ಮಕ್ಕಳಿಗೆ ತಕ್ಷಣವೇ ಪರಿಹಾರ ನೀಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಎಲ್.ಎನ್. ರಾವ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ರಜಾ ಪೀಠವು, ಸಾಂಕ್ರಾಮಿಕ ರೋಗದಿಂದ ಹೆತ್ತವರನ್ನು ಕಳೆದುಕೊಂಡ ಅನಾಥ ಮಕ್ಕಳನ್ನು ಗುರುತಿಸಿ, ಅವರ ಬಗೆಗಿನ ಸಮಗ್ರ ಮಾಹಿತಿಯನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ‘ಬಾಲ್ ಸ್ವರಾಜ್’ ವೆಬ್‌ಸೈಟ್‌ಗೆ ಶನಿವಾರ ಸಂಜೆಯೊಳಗೆ ಅಪ್‌ಲೋಡ್ ಮಾಡಬೇಕು ಎಂದು ಆಯಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದೆ. ‘ಮಹಾರಾಷ್ಟ್ರದಲ್ಲಿ ಕೋವಿಡ್‌ನಿಂದಾಗಿ 2,900ಕ್ಕೂ…