ಶಶಿಕಲಾಗೆ ಜೈಲಿನಲ್ಲಿ ವಿಶೇಷ ಅತಿಥ್ಯ: ೨ತಿಂಗಳಲ್ಲಿ ವರದಿ ಸಲ್ಲಿಸಲು ಹೈ ಗಡವು
ಬೆಂಗಳೂರು,ಜೂ,೧೧: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತ ಆಪ್ತೆ ಶಶಿಕಲಾಗೆ ಜೈಲಲ್ಲಿ ನೀಡಲಾಗುತ್ತಿದ್ದ ವಿಶೇಷ ಆತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಇನ್ನೂ ಎರಡು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ವಿಕೆ ಶಶಿಕಲಾಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿತ್ತು. ಜೈಲು ವರಿಷ್ಠಾಧಿಕಾರಿಗಳು ಲಂಚ ಪಡೆದು ಜೈಲಿನಲ್ಲಿ ಆಕೆಗೆ ವಿಶೇಷ ಸೌಲಭ್ಯಗಳನ್ನು ಒದಗಿಸಿದ್ದರು ಎಂಬ ಗಂಭೀರ ಆರೋಪ ವ್ಯಾಪಕ ಸದ್ದು ಮಾಡಿತ್ತು.…