ಕಾಂಗ್ರೆಸ್ ಪಕ್ಷದಲ್ಲಿ ವ್ಯಾಪಕ ಸುಧಾರಣೆ ಅಗತ್ಯ-ಕಪಿಲ್ ಸಿಬಲ್
ನವದೆಹಲಿ,ಜೂ,೧೩:ಕಾಂಗ್ರೆಸ್ ಪಕ್ಷ ಜಡತ್ವವನ್ನು ಬಿಟ್ಟು ಸಕ್ರಿಯ ರಾಜಕಾರಣದತ್ತ ಮುಖಮಾಡಬೇಕು ಮತ್ತು ಸಂಘಟನಾ ವಲಯದಲ್ಲಿ ವ್ಯಾಪಕ ಸುಧಾರಣೆಗಳ ಅಗತ್ಯವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ. ಭಾರತಕ್ಕೆ ಪುನಃ ಚೇತರಿಸಿಕೊಂಡ ಕಾಂಗ್ರೆಸ್ ಪಕ್ಷದ ಅಗತ್ಯವಿದೆ. ಅದಕ್ಕಾಗಿ ಜಡತ್ವವನ್ನು ಬಿಟ್ಟು ಸಕ್ರಿಯವಾಗಿ ಅರ್ಥಪೂರ್ಣವಾಗಿ ತೊಡಗಿಸಿಕೊಳ್ಳುವ ಮನಸ್ಥಿತಿ ಇದೆ ಎಂದು ಇದು ಸಂಭವಿಸಬೇಕಾದರೆ ಕೇಂದ್ರ ಹಾಗೂ ರಾಜ್ಯ ಸಂಘಟನಾ ವಲಯದಲ್ಲಿ ವ್ಯಾಪಕ ಸುಧಾರಣೆಗಳನ್ನು ಮಾಡಬೇಕಿದೆ. ಈ ಮೂಲಕ ಪಕ್ಷವು ಸಂಘಟನಾ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ಸಾಬೀತು ಮಾಡಬೇಕು ಎಂದಿದ್ದಾರೆ…