ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತಷ್ಟು ಇಳಿಮುಖ
ಬೆಂಗಳೂರು,ಜೂ,೧೫:ಲಾಕ್‌ಡೌನ್ ಎಫೆಕ್ಟ್ ಮತ್ತು ಕೊರೊನಾ ನಿಯಂತ್ರಣಕ್ಕೆ ತಗೆದುಕೊಂಡಿರುವ ಕೆಲ ನಿರ್ಧಾರಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಮುಖ ಕಾಣುತ್ತಿದೆ. ಇದರ ಪರಿಣಾಮವಾಗಿ ಮಂಗಳವಾರ ೫,೦೪೧ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ ೨೭,೭೭,೦೧೦ಕ್ಕೆ ಏರಿಕೆಯಾಗಿದೆ. ಕಳೆದ ೨೪ ಗಂಟೆಯಲ್ಲಿ ಮಹಾಮಾರಿಗೆ ೧೧೫ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೩೩,೧೪೮ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ೯೮೫ ಮಂದಿಗೆ ಸೋಂಕು ದೃಢಪಟ್ಟಿದ್ದು,…