ಓಲಂಪಿಕ್ ಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ 10 ಲಕ್ಷ ರೂ ಘೋಷಣೆ
ಬೆಂಗಳೂರು, ಜೂನ, 26:ಟೋಕಿಯೋ ಓಲಂಪಿಕ್ ಗೆ ರಾಜ್ಯದ ಐವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನಪಡೆದಿದ್ದು, ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹ ಧನ ಘೋಷಿಸಿ ಆದೇಶ ಹೊರಡಿಸಲಾಗಿದೆ. 2020 ರ ಓಲಂಪಿಕ್ ಕ್ರೀಡಾಕೂಟವು ಜಪಾನ್ ಟೋಕಿಯೋದಲ್ಲಿ ಜುಲೈ 23 ರಿಂದ ಸೆಪ್ಟಂಬರ್ 5 ರ ವರೆಗೆ ನಡೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡುವುದು…