ರಾಜ್ಯದ ನೂತನ ರಾಜ್ಯಪಾಲರಾಗಿ ಥಾಮರ್ ಚಂದ್ ನೇಮಕ
ಬೆಂಗಳೂರು,ಜು,೦೬: ಕರ್ನಾಟಕ ರಾಜ್ಯಪಾಲ ವಾಜುಭಾಯ್ ವಾಲಾ ಅವರ ಅವಧಿ ಮುಗಿದ ಕಾರಣ ನೂತನ ರಾಜ್ಯಪಾಲರನ್ನಾಗಿ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಿಸಲಾಗಿದೆ. ಕರ್ನಾಟಕ ಸೇರಿದಂತೆ ೮ ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚರನೆ ಬೆನ್ನಲ್ಲೇ ನೇಮಕಾತಿಯಾಗಿದೆ. ಈ ಮೂಲಕ ಕರ್ನಾಟಕದ ೧೯ನೇ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕರಿಸಲಿದ್ದಾರೆ. ಕರ್ನಾಟಕ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ನೇಮಕವಾಗುವ ಜತೆಗೆ ಒಟ್ಟು ೮ ರಾಜ್ಯಗಳಿಗೆ…