ಇಂಡಿ ತಾಲೂಕಿನ 23 ಕೆರಗಳ ತುಂಬಿಸುವ ಯೋಜನೆಗೆ ಅನುದಾನ ನೀಡಲು ಎಂ.ಬಿ ಪಾಟೀಲ್ ಮನವಿ
ಬೆಂಗಳೂರು,ಜು0 9. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ 23 ಕೆರೆಗಳನ್ನು ತುಂಬಿಸುವ ಯೋಜನೆಗೆ ಅನುದಾನ ಒದಗಿಸುವಂತೆ ಕೋರಿ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿ ವಿನಂತಿಸಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಯಡಿಯೂರಪ್ಪನವರನ್ನು ಭೇಟಿ ಮಾಡಿ, ಚರ್ಚಿಸಿದ ಎಂ.ಬಿ.ಪಾಟೀಲ್‍ರವರು ಭೀಮಾನದಿ ಪಾತ್ರದಲ್ಲಿ ನೀರಿನ ಕೊರತೆಯ ಕಾರಣ ಇಂಡಿ ಭಾಗದ ಕೆಲವು ಪ್ರದೇಶಕ್ಕೆ ನೀರಾವರಿ ಸೌಕರ್ಯ ಕಲ್ಪಿಸಲಾಗಿಲ್ಲ. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಕೃಷ್ಣಾ ನದಿ ನೀರನ್ನು ಎತ್ತಿ, ಭೀಮಾ ಭಾಗದ ಈ ಹಳ್ಳಿಗಳಿಗೆ…