ಮೇಕೆದಾಟು ಯೋಜನೆ,ಸರ್ವಪಕ್ಷ ಸಭೆ ಅನಿವಾರ್ಯ-ಎಂ.ಬಿ.ಪಾಟೀಲ್
ವಿಜಯಪುರ,ಜು,೧೩: ಮೇಕೆ ದಾಟು ಯೋಜನೆಗೆ ತಮಿಳು ಸರ್ಕಾರದ ಅಗತ್ಯವಿಲ್ಲ ಎಂದಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷಸಭೆ ಕರೆದು ಚರ್ಚಿಸಿ ಕೇಂದ್ರದ ಮೇಲೆ ಒತ್ತಡ ತರುವ ಅನಿವಾರ್ಯತೆ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕದಾಟು ಕಾನೂನು ಬದ್ಧವಾದ ಯೋಜನೆ, ಇದು ನಮ್ಮ ರಾಜ್ಯದ ಹಕ್ಕು. ಇದಕ್ಕೆ ತಮಿಳುನಾಡಿನ ಅನುಮತಿ ಅಗತ್ಯವಿಲ್ಲ ಎಂದು ಹೇಳಿದರು. ತಮಿಳುನಾಡಿನ ಆಕ್ಷೇಪದ ಬಗ್ಗೆ ರಾಜ್ಯ ಸರ್ಕಾರ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿದರು.…