ಕಾವೇರಿ ಹೋರಾಟಗಾರ ,ಮಾಜಿ ಸಂಸದ ಜಿ.ಮಾದೇಗೌಡ ನಿಧನ
ಮಂಡ್ಯ,ಜು,17: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದ, ಕಾವೇರಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೋರಾಟಗಾರ ಜಿ.ಮಾದೇಗೌಡ (92) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾದೆ ಕೊನೆಯುಸಿರೆಳೆದಿದ್ದಾರೆ. 1980ರ ದಶಕದಲ್ಲಿ ಆರ್ ಗುಂಡೂರಾವ್ ಅವರ ಮಂತ್ರಿ ಮಂಡಲದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಮಾದೇಗೌಡರು ಮಂಡ್ಯದ ಅಂದಿನ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ…