Girl in a jacket

Daily Archives: July 21, 2021

ರಾಹುಲ್ ಗಾಂಧಿ ಜೊತೆ ಸಿದ್ದು ಪ್ರತ್ಯೇಕ ಮಾತುಕತೆ; ಪಕ್ಷದಲ್ಲಿ ತಳಮಳ

ಬೆಂಗಳೂರು, ಜು,21:ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಸಿಎಂ ವಿಚಾರವಾಗಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಪ್ರತ್ಯೇಕವಾಗಿ ಮಾತನಾಡಿರುವುದು ಕಾಂಗ್ರೆಸ್ ನಾಯಕರಲ್ಲಿ ತಳಮಳಕ್ಕೆ ಕಾರಣವಾಗಿದೆ . ಮುಂದಿನ ಸಿಎಂ ವಿಚಾರವಾಗಿ ಸೃಷ್ಟಿಯಾಗಿರುವ ಬಿಕ್ಕಟ್ಟು ಪರಿಹರಿಸಕೆಂದೆ ದೆಹಲಿಗೆ ಕರೆಸಿಕೊಂಡು ಒಗ್ಗಟ್ಟಿನಲ್ಲಿ ಮುನ್ನಡೆಯಿರಿ ಎಂದು ಸೂಚಿಸಿದ್ದರಾದರೂ ಸಿದ್ದರಾಮಯ್ಯ ಜೊತೆಗಿನ ಪ್ರತ್ಯೇಕ ಮಾತುಕತೆ ಮಾತ್ರ ಎಲ್ಲರಲ್ಲೂ ಅಚ್ಚರಿಗೆ ಕಾರಣವಾಗಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾದರೆ ಕಾಂಗ್ರೆಸ್‌ ಯಾವ ರೀತಿಯ ಹೆಜ್ಜೆ ಇಡಬಹುದು. ಮುಂದಿನ ಕಾರ್ಯತಂತ್ರ ಹಾಗೂ…

26ರಿಂದ ಡಿಗ್ರಿ ಕಾಲೇಜ್‌ ಆರಂಭ; ಈವರೆಗೆ 75% ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ

ಬೆಂಗಳೂರು,ಜು,21: ಈ ತಿಂಗಳ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರು ಆದ ಉಪ ಮಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಬುಧವಾರ ಟೊಕಿಯೋ ಒಲಿಂಪಿಕ್‌-2020 ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಶುಭಕೋರುವ ವರ್ಚುಯಲ್‌ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅವರು ಮಾಧ್ಯಮಗಳ ಮಾತನಾಡಿದರು. ಈಗಾಗಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ವೇಗವಾಗಿ ಸಾಗುತ್ತಿದೆ. ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ…

ನಾಯಕರನ್ನು ಭೇಟಿಯಾಗಲು ದೆಹಲಿಗೆ ಆಗಮಿಸಿದ ರೇಣುಕಾಚಾರ್ಯ

ನವದೆಹಲಿ, ಜು. ೨೧: ಬಿಎಸ್‌ವೈ ಅಧಿಕಾರಿದಂದ ಕೆಳಗಿಳಿಯುವುದು ಖಚಿತವಾಗುತ್ತಿದ್ದಂತೆ ಬಿಜೆಪಿ ನಾಯಕರು ದೆಹಲಿಗೆ ಬರುತ್ತಿದ್ದಾರೆ. ಇದರ ಭಾಗವಾಗಿ ಈಗ ಅವರ ಆಪ್ತ ರೇಣುಕಾಚಾರ್ಯ ಅವರು ದಿಡೀರ್ ನಿನ್ನೆ ರಾತ್ರಿ ಇಲ್ಲಿಗೆ ಆಗಮಿಸಿದ್ದಾರೆ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸದಂತೆ ನಡೆಯುತ್ತಿರುವ ಒತ್ತಡ ಹೇರುವ ತಂತ್ರದ ಮುಂದುವರಿದ ಭಾಗವಾಗಿ ರೇಣುಕಾಚಾರ್ಯ ಅವರು ದೆಹಲಿಗೆ ಆಗಮಿಸಿದ್ದು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಹಿನ್ನಲೆಯಲ್ಲಿ ಅವರು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್…

ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಇಂದು ವಿದ್ಯುಕ್ತ ಚಾಲನೆ

ಟೋಕಿಯೋ,ಜು, ೨೧:ಕೊನೆಗೂ ಒಂದು ವರ್ಷದ ಬಳಿಕ ಇಲ್ಲಿನ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಇಂದು ವಿದ್ಯುಕ್ತ ಚಾಲೆನೆ ಸಿಕ್ಕಿದೆ.ಕೊರೊನಾ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಮುಂದೂಡಲಾಗಿತ್ತು . ಆತಿಥೇಯ ಜಪಾನ್ ಮತ್ತು ಆಸ್ಟ್ರೇಲಿಯಾ ನಡುವಿನ ಸಾಫ್ಟ್ ಬಾಲ್ ಪಂದ್ಯದ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ಸಿಕ್ಕಿತು. ೨೦೧೧ರ ಸುನಾಮಿ ಮತ್ತು ಪರಮಾಣು ದುರಂತದಲ್ಲಿ ಭಾರೀ ಸಂಕಷ್ಟಕ್ಕೀಡಾಗಿದ್ದ ಫುಕುಶಿಮಾ ಎಂಬ ಪ್ರದೇಶದಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯರು ೮-೧ರಿಂದ ಗೆದ್ದು ಬೀಗಿದರು. ಒಲಿಂಪಿಕ್ಸ್ ಕ್ರೀಡಾಕೂಟ ಇಂದು ಆರಂಭವಾದರೂ ಅಧಿಕೃತವಾಗಿ ಚಾಲನೆಗೊಳ್ಳುವುದು ಜುಲೈ ೨೩, ಶುಕ್ರವಾರದಂದು.…

ಮನೆಯೊಳಗೆ ಮಠ ನಿನಗೆ ಮಂಕುತಿಮ್ಮ

ಸಿದ್ಧಸೂಕ್ತಿ : ಮನೆಯೊಳಗೆ ಮಠ ನಿನಗೆ ಮಂಕುತಿಮ್ಮ. ಸಂಸಾರದಲ್ಲಿ ತಂದೆ ತಾಯಿ ಅಜ್ಜ ಅಜ್ಜಿ ಸಹೋದರ ಸಹೋದರಿ ಅತ್ತೆ ಮಾವ ಗಂಡ ಹೆಂಡತಿ ಮಕ್ಕಳ ಹೊಣೆ. ನಿಭಾಯಿಸಲು ಪರದಾಡಬೇಕು. ಸಂಸಾರ ದುಃಖ.ಸಂನ್ಯಾಸಿಯಾಗಿ ಮಠ ಸೇರಿದರೆ ಇದಿಲ್ಲ!ಉಚಿತ ಪ್ರಸಾದ, ಪಾದ ಕಾಣಿಕೆ, ವಸ್ತ್ರ ಗೌರವ ಸಮ್ಮಾನ ಪೂಜೆ ಸೇವೆ ಎಲ್ಲ ಲಭ್ಯ! ಸಂನ್ಯಾಸ ಸುಖ! ಎನ್ನುವರುಂಟು. ಸಂನ್ಯಾಸವೇನು ಹೊಣೆಗೇಡಿತನವೇ? ಕಾಷಾಯ ತೊಟ್ಟರೆ ಸಂನ್ಯಾಸವೇ? ಭಾವ ನಿರ್ಭಾವ ಆಗುವುದು ಸಂನ್ಯಾಸ! ನಾಯಮಾತ್ಮಾ ಬಲಹೀನೇನ ಲಭ್ಯಃ=ಸಂನ್ಯಾಸ ಆತ್ಮಜ್ಞಾನ ನಿಷ್ಠೆಗಳು ಬಲಹೀನನಿಗೆ ದಕ್ಕವು.…

Girl in a jacket