ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಸದಾಶಿವ ಶೆಣೈ ಅಧಿಕಾರ ಸ್ವೀಕಾರ
ಬೆಂಗಳೂರು,ಜು,26:ಸರ್ಕಾರ ನೇಮಕ ಮಾಡಿರುವ ಕರ್ನಾಟಕ ಮಾಧ್ಯಮ ಅಕಾಡಮಿಗೆ ಅಧ್ಯಕ್ಷ ಸದಾಶಿವ ಶೆಣೈ ಅವರು ಅಧಿಕಾರ ಸ್ವೀಕರಿಸಿದರು. ಈ ವೇಳೆ ಸದಸ್ಯರಾದ ಕೆ.ಕೆ.ಮೂರ್ತಿ,ಕೆಯುಡಬ್ಲೂಜೆ ಅಧ್ಯಕ್ಷ ಶಿವಾನಂದ ತಗಡೂರು,ಶಿವಕುಮಾರ್ ಬೆಳ್ಳಿ ತಟ್ಟೆ ಹಾಜರಿದ್ದರು. ಇದೇ ವೇಳೆ ಹಾಜರಿದ್ದ ಅಕಾಡೆಮಿ ಮಾಜಿ ಅಧ್ಯಕ್ಷ ಪೊನ್ನಪ್ಪ ಅವರು, ಮುಂದಿನ ಸವಾಲುಗಳು ಹಾಗೂ ಮಾಡಬೇಕಾದ ಕಾರ್ಯಗಳ ಕುರಿತು ಸಲಹೆ ನೀಡಿದರು.