ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ
ಬೆಂಗಳೂರು,ಜು,೨೭: ಬಿಜೆಪಿಯ ಮಹತ್ತರ ಬೆಳವಣಿಗೆಯಲ್ಲಿ ಗೃಹಸಚಿವರಾಗಿದ್ದ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಈಮೊದಲೇ ದೆಹಲಿಯಿಂದ ಬಂದಿದ್ದ ವೀಕ್ಷಕರು ಅವರ ಹೆಸರನ್ನೇ ಅಂತಿಮ ಮಾಡಿದ್ದರು ಆದರೆ ಸಂಪ್ರದಾಯದಂತೆ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅವರ ಹೆಸರನ್ನು ಆಯ್ಕೆ ಮಾಡಬೇಕಿತ್ತು ಅದರಂತೆ ಇಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಸವರಾಜ್ ಬೊಮ್ಮಾಯಿ ಅವರ ಹೆಸರನ್ನು ಪ್ರಸ್ತಾಪಿಸಿದರು ಅದಕ್ಕೆ ಗೋವಿಂದ್ ಕಾರಜೋಳ ಅವರು ಅನುಮೋದನೆ ನೀಡಿದರು. ಈ ಮೂಲಕ ರಾಜ್ಯದ ಮುಖ್ಯಮಂತ್ರಿಯಾಗಿ…