ಪ್ರಧಾನಿ ಭೇಟಿ ಮಾಡಿ ಚರ್ಚಿಸಿದ ಸಿಎಂ ಬೊಮ್ಮಾಯಿ
ನವದೆಹಲಿ,ಜು,೩೦: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ದೆಹಲಿ ಪ್ರಯಾಣ ಬೆಳಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಬಿಜೆಪಿ ವರಿಷ್ಠರ ಜೊತೆಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಂಗ್ ಶೇಖಾವತ್ ಅವರನ್ನೂ ಭೇಟಿ ಮಾಡಿದ್ದು ರಾಜ್ಯದ ಸಂಸದರಿಗೆ ಔತಣ ಕೂಟ ಆಯೋಜಿಸಿದ್ದರು. ಹುಬ್ಬಳ್ಳಿ-ಧಾರವಾಡಕ್ಕೆ…