ಬೆಂಗಳೂರಲ್ಲಿ ವಾರಾಂತ್ಯ ಕರ್ಫ್ಯೂ ಸದ್ಯಕ್ಕಿಲ್ಲ: ಗೌರವ್ ಗುಪ್ತ
ಬೆಂಗಳೂರು,ಆ, 07: ‘ನಗರದಲ್ಲಿ ಕೋವಿಡ್ ನಿಯಂತ್ರಣ ಸಲುವಾಗಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸುವ ಪ್ರಸ್ತಾಪ ಸದ್ಯಕ್ಕೆ ಬಿಬಿಎಂಪಿ ಮುಂದಿಲ್ಲ’ ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತ ಸ್ಪಷ್ಟಪಡಿಸಿದರು. ‘ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿಕೊಂಡ ಎಂಟು ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ನಿತ್ಯ ಸರಾಸರಿ 450ರಷ್ಟು ಕೋವಿಡ್ ಪ್ರಕರಣಗಳು ಮಾತ್ರ ಪತ್ತೆಯಾಗುತ್ತಿವೆ. ನಗರದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟವರಲ್ಲಿ ಸೊಂಕು ಪತ್ತೆ ದರ ಶೇ 1ಕ್ಕಿಂತ ಕಡಿಮೆ ಇದೆ. ರಾಜ್ಯದ ಗಡಿಭಾಗದ ಹಲವಾರು ಜಿಲ್ಲೆಗಳಲ್ಲಿ ಸೋಂಕು…