ಸರ್ಕಾರ ಜನರ ಜೀವನದ ಜೊತೆಚಲ್ಲಾಟವಾಡುತ್ತಿದೆ-ಡಿಕೆಶಿ
ಬೆಂಗಳೂರು,ಆ,೧೦: ಕೋವಿಡ್ ೨ನೇ ಅಲೆಯಲ್ಲಿ ಆಗಿರುವ ನಷ್ಟಕ್ಕೆ ರೈತರಿಗೆ ಸರ್ಕಾರದಿಂದ ಈವರೆಗೂ ಪರಿಹಾರ ಸಿಕ್ಕಿಲ್ಲ. ಬೆಳೆಗೆ ಬೆಲೆ ಇಲ್ಲದೆ ರೈತರು ಪರದಾಡುತ್ತಿದ್ದಾರೆ. ಸರ್ಕಾರ ಇದ್ಯಾವುದರ ಬಗ್ಗೆಯೂ ಚಿಂತಿಸದೇ ಜನರ ಜೀವನದ ಜತೆ ಚೆಲ್ಲಾಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಹೊಸ ಸರ್ಕಾರ ಬಂದಿದೆ, ಜನರ ರಕ್ಷಣೆ ಮಾಡುತ್ತದೆ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ. ಹಾರ-ತುರಾಯಿ ಹಾಕಿಸಿಕೊಳ್ಳುವವರಿಗೆ ನಾನು ಬೇಡ ಎನ್ನುವುದಿಲ್ಲ. ಕೋವಿಡ್ ಸೋಂಕು…