ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ; ಶೀಘ್ರ ಆರೋಪಿಗಳ ಪತ್ತೆ- ಗೃಹಸಚಿವರ ಭರವಸೆ
ಬೆಂಗಳೂರು,ಆ,12: ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ ಎರಡು ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ತಡರಾತ್ರಿ 1.25 ರ ವೇಳೆಗೆ ಈ ಘಟನೆ ಜರುಗಿದ್ದು, ಫಾರ್ಚೂನರ್ ಕಾರು ಹಾಗೂ ಮಹೀಂದ್ರ ಥಾರ್ ಜೀಪ್ ಬೆಂಕಿಗಾಹುತಿ ಆಗಿವೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದ್ದು, ನಾಲ್ಕು ಜನ ವ್ಯಕ್ತಿಗಳು ಪೆಟ್ರೋಲ್ ಕ್ಯಾನ್ಗಳನ್ನ ತಂದು ಬೆಂಕಿ ಹಚ್ಚಿರುವುದು ಕಂಡು ಬಂದಿದೆ. ಮನೆಯ ಅಂಗಳದೊಳಗೆ ಈ ಕಾರುಗಳನ್ನ ನಿಲ್ಲಿಸಲಾಗಿತ್ತು. ಘಟನಾ ಸ್ಥಳಕ್ಕೆ ಗೃಹಸಚಿವ ಅರಗ ಜ್ಞಾನೇಂದ್ರ ಬೇಟಿ…