ಮಹಿಳಾ ಹಾಕಿ ಕೋಚ್ ಅಂಕಿತಾಗೆ ಸಿಎಂ ಬೊಮ್ಮಾಯಿ ಸನ್ಮಾನ
ಬೆಂಗಳೂರು,ಆ,13:ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಕೋಚ್ ಅಂಕಿತಾ ಅವರನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಸನ್ಮಾನಿಸಿ ಗೌರವಿಸಿದರು. ಟೋಕಿಯೋ ಒಲಂಪಿಕ್ ಟೂರ್ನಿಯಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿದೆ. ಪದಕ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಆ ಮಹಿಳಾ ತಂಡ ಗೆದ್ದಿದೆ. ಆ ತಂಡದ ತರಬೇತಿದಾರರಾದ ನಿಮಗೆ ತುಂಬು ಹೃದಯದ ಶುಭಾಶಯ ಕೋರುತ್ತೇನೆ. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಸಿಎಂ…