
Daily Archives: August 14, 2021
ವಿಜಯನಗರ ಕಾಲದ ಅಣೆಕಟ್ಟೆಗಳು ಮತ್ತು ಪರಿಸರಸ್ನೇಹಿ ತಂತ್ರಜ್ಞಾನವೂ . . .
ವಿಜಯನಗರ ಕಾಲದ ಅಣೆಕಟ್ಟೆಗಳು ಮತ್ತು ಪರಿಸರಸ್ನೇಹಿ ತಂತ್ರಜ್ಞಾನವೂ . . . ನಮ್ಮ ಹಳ್ಳಿಗಳಲ್ಲಿ ಒಂದು ನಾಣ್ಣುಡಿ ಸಾಮಾನ್ಯವಾಗಿದೆ. ಅದೆಂದರೆ “ಧರ್ಮದ ಊರಿನ ಮುಂದೆ ಮಳೆ ಬಂದರೆ, ಕರ್ಮದ ಊರಿನ ಮುಂದೆ ಹಳ್ಳ ಹರಿಯಿತು ಎಂಬುದು. ಕಳೆದ ಇಪ್ಪತ್ತೆಂಟು ವರ್ಷಗಳ ನನ್ನ ಅನುಭವದಲ್ಲಿ ೨೦೦೯ನ್ನು ಹೊರತುಪಡಿಸಿದರೆ ಬಳ್ಳಾರಿ ಜಿಲ್ಲೆಯಲ್ಲಿ ಮಳೆ ಸುರಿದದ್ದು ತೀರ ಅಪರೂಪವೇ. ಆದರೆ ಇಲ್ಲಿನ ತುಂಗಭದ್ರೆ ಮಾತ್ರ ಪ್ರತಿವರ್ಷವೂ ಮೈದುಂಬಿ ಹರಿದು ತನ್ನ ಕಬಂದಬಾಹುಗಳಿಂದ ಪ್ರವಾಹವನ್ನು ನಿರಂತರವಾಗಿ ಸೃಷ್ಟಿಸುತ್ತಾ ಬಂದಿದ್ದಾಳೆ. ಬಿಸಿಲ ಬೇಗೆ ಮತ್ತು…
ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭ
ಬೆಂಗಳೂರು, ಆ, 14:ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ,…
ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ :ಸಿಎಂ
ಬೆಂಗಳೂರು, ಆ,14 : ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನತೆಗೆ ಕರೆ ನೀಡಿದರು. ನಗರದ ವಿಧಾನಸೌಧದ ವೈಭವೋಪೇತ ಮೆಟ್ಟಿಲುಗಳ ಮೇಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು, ಸ್ವಾತಂತ್ರ್ಯ ನನ್ನ ಆ ಜನ್ಮ ಸಿದ್ಧ ಹಕ್ಕು ಎಂಬ ಗೋಪಾಲ ಕೃಷ್ಣ ಗೋಖಲೆಯವರ ವೀರೋಚಿತ…
ಬೊಮ್ಮಾ ಯಿ ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ : ಸಿದ್ದರಾಮಯ್ಯ
ಬೆಂಗಳೂರು ,ಆ,14: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ತಮ್ಮ ನಿವಾಸದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸರ್ಕಾರದಲ್ಲಿ ಗೊಂದಲ ಮುಂದುವರಿದಿದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದು ಅನುಮಾನ. ಯಾವುದೇ ಸಂದರ್ಭದಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ್, ರಾಮದಾಸ…
ಮೋದಿ ಆರ್ಥಿಕ ಮತ್ತು ವಿದೇಶಾಂಗ ನೀತಿ ವಿರುದ್ಧ ಸುಬ್ರಮಣ್ಯಂ ಸ್ವಾಮಿ ವಿರೋಧ
ನವದೆಹಲಿ,ಆ,14: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಮತ್ತು ವಿದೇಶಿ ನೀತಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, ‘ಮೋದಿ ಭಾರತದ ರಾಜ ಅಲ್ಲ’ ಎಂದು ಹೇಳಿದ್ದಾರೆ. ತಮ್ಮ ಆಯ್ಕೆಯ ಸಚಿವ ಸ್ಥಾನ ನೀಡದಿರುವುದು ನಿಮ್ಮ ಅಸಮಾಧಾನಕ್ಕೆ ಕಾರಣ ಎಂದು ವಾದಿಸಿದ ಟ್ವಿಟರ್ ಬಳಕೆದಾರರೊಬ್ಬರಿಗೆ ಉತ್ತರಿಸಿದ ಸುಬ್ರಮಣಿಯನ್ ಸ್ವಾಮಿ, ನಾನು ಬೇರೆ ಕಾರಣಕ್ಕಾಗಿ “ಮೋದಿ ವಿರೋಧಿ” ಎಂದು ಹೇಳಿದ್ದಾರೆ. “ನಾನು ಆರ್ಥಿಕತೆ ಮತ್ತು ವಿದೇಶಾಂಗ ನೀತಿಗಾಗಿ ಮೋದಿ ವಿರೋಧಿ…
ರಾಜ್ಯದ ಮುನ್ನಡೆಯ ಬಗ್ಗೆ ಸರ್ಕಾರದ ಚಿಂತನೆ: ಬೊಮ್ಮಾಯಿ
ಬೆಂಗಳೂರು, ಆ, 14:”75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ಸೌಭಾಗ್ಯ ಒದಗಿಬಂದಿದೆ. ಕನ್ನಡ ನಾಡು, ನುಡಿ, ಸಾಹಿತ್ಯ, ಆಡಳಿತ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದೇಶದಲ್ಲೇ ಮಾದರಿಯಾಗಿದೆ. 75 ವರ್ಷ ನಡೆದು ಬಂದ ದಾರಿ, ಇನ್ನೂ ನಡೆಯಬೇಕಾದ ದಾರಿಯ ಬಗ್ಗೆ ಚಿಂತನೆ ಮಾಡಬೇಕಿದೆ. ನಮ್ಮ ಸರ್ಕಾರ ಕೂಡ ಅದೇ ದಿಕ್ಕಿನಲ್ಲಿ ಚಿಂತನೆ ಮಾಡುತ್ತಿದೆ”- ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು “ಕೋವಿಡ್ ಮಾರ್ಗಸೂಚಿ ಪ್ರಕಾರ, ಅಂತರ ಕಾಪಾಡಿಕೊಂಡು ಸ್ವಾತಂತ್ರ್ಯ ದಿನ…
ತಾಯಿಗಿಂತ ಬಂಧುವಿಲ್ಲ, ಉಪ್ಪಿಗಿಂತ ರುಚಿಯಿಲ್ಲ
ಸಿದ್ಧಸೂಕ್ತಿ : ತಾಯಿಗಿಂತ ಬಂಧುವಿಲ್ಲ, ಉಪ್ಪಿಗಿಂತ ರುಚಿಯಿಲ್ಲ. ಬಂಧ ಸಂಬಂಧ. ಬಂಧ ಉಳ್ಳವನು/ಳು ಬಂಧು. ತಾಯಿಯಂಥ ಸಂಬಂಧಿ ಯಾರೂ ಇಲ್ಲ. ಅವಳು ಉಪ್ಪಿನಂತೆ. ಉಪ್ಪು ಎಲ್ಲಕ್ಕೂ ಸೈ. ಸೌತೆ, ಕಲ್ಲಂಗಡಿ ಉಪ್ಪು ಬೆರೆಸಿ ತಿಂದು ನೋಡಿ. ಸಿಹಿ ಅಡಿಗೆಗೂ ಒಂದಿಷ್ಟು ಉಪ್ಪು ಬೇಕು! ಉಪ್ಪಿಲ್ಲದ ಅಡಿಗೆ ಉಂಡು ನೋಡಿ! ತಿಳಿಯುವುದು ಉಪ್ಪಿನ ಮಹಿಮೆ! ಸಿಹಿ ಕಹಿ ಖಾರ ಹುಳಿ ವಗರು ರುಚಿಗಿಂತ ಉಪ್ಪೇ ಹಿರಿ ರುಚಿ! ಅಣ್ಣ ಅತ್ತಿಗೆ ಅಳಿಯ ಅತ್ತೆ ಮಾವಾದಿಗರು ಇರಬಹುದು ನೂರಾರು…
