ಕೊನೆಗೂ ಪ್ರವಾಸೋದ್ಯಮ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಆನಂದ್ ಸಿಂಗ್
ಬೆಂಗಳೂರು,ಆ.೨೪: ಖಾತೆ ವಿಚಾರಕ್ಕೆ ಮುನಿಸಿಕೊಂಡಿದ್ದ ಸಚಿವ ಆನಂದ್ ಸಿಂಗ್ ಸದ್ಯಕ್ಕೆ ಶಮನವಾಗಿದ್ದು, ಇಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಸಚಿವ ಆನಂದ್ ಸಿಂಗ್ ಅವರು ತಮ್ಮ ರಾಜೀನಾಮೆ ನಿರ್ಧಾರ ತಿಳಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲು ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದರು. ಸಿಂಗ್ ಜೊತೆಗೆ ರಾಜೂಗೌಡ ಕೂಡ ಬಂದಿದ್ದರು. ಸಿಎಂ ಬೊಮ್ಮಾಯಿ ಆನಂದ್ ಸಿಂಗ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ದುಡುಕಿನ ನಿರ್ಧಾರ ಕೈಗೊಳ್ಳಬೇಡಿ, ಇರುವ ಖಾತೆಯಲ್ಲೇ ಮುಂದುವರೆಯಿರಿ. ನಾಳೆ…