ಮೈಸೂರು ಚಾಮುಂಡಿಬೆಟ್ಟದ ತಪ್ಪಲಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಮೈಸೂರು,ಆ,25: ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮೈಸೂರಿನಲ್ಲಿ ನಡೆದಿದೆ. ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಸಂಜೆ ಘಟನೆ ಸಂಭವಿಸಿದೆ. ಹಾಡಹಗಲೇ ಯುವಕನಿಗೆ ಗುಂಡು ಹಾರಿಸಿ ಜ್ಯುವೆಲ್ಲರಿ ಶಾಪ್ ದರೋಡೆ, ಯುವತಿಗೆ ಚಾಕುವಿನಿಂದ ಇರಿತ ಪ್ರಕರಣಗಳು ಮಾಸುವ ಮುನ್ನವೇ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಚಾಮುಂಡಿ ಬೆಟ್ಟಕ್ಕೆ ಯುವತಿಯು ತನ್ನ ಪ್ರಿಯಕರನ ಜೊತೆ ತೆರಳಿದ್ದಳು. ಅವರಿಬ್ಬರು ಬೈಕ್ನಲ್ಲಿ ವಾಪಸ್ ಬರುವಾಗ ಲಲಿತಾದ್ರಿಪುರ ರಸ್ತೆಯ…