ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಚಾಲನೆ
ಬೆಂಗಳೂರು, ಆ,27:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯದಲ್ಲಿ ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಇ-ಶ್ರಮ ಯೋಜನೆಗೆ ಚಾಲನೆ ನೀಡಿದರು. ಸ್ವಾತಂತ್ರ್ಯ ಬಂದ ನಂತರ ಅಸಂಘಟಿತ ಕಾರ್ಮಿಕರ ನೋಂದಣಿ ಮೊದಲ ಬಾರಿ ನಡೆಯುತ್ತಿದೆ. ಅವರನ್ನು ಗುರುತಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಜೀವನದ ಭದ್ರತೆ, ಆರೋಗ್ಯ, ಶಿಕ್ಷಣ ಮೊದಲಾದ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಅವರಿಗೆ ಜೀವನ ಭದ್ರತೆಯೊಂದಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ದೊರೆಯುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಆಶಿಸಿದರು. ಕೂಲಿ ಕಾರ್ಮಿಕ ಇರಲಿ, ರೈತ ಕಾರ್ಮಿಕ ಇರಲಿ,…