ದೇಶ ವಿರೋಧಿ ಚಟುವಟಿಕೆ ಮೇಲೆ ನಿಗಾ: ಬೊಮ್ಮಾಯಿ
ಹುಬ್ಬಳ್ಳಿ,ಸೆ,01:ದೇಶವಿರೋಧಿ ಚಟುವಟಿಕೆ ಕುರಿತು ರಾಜ್ಯ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದೆ. ಎನ್ ಐ ಎ ಜೊತೆ ನಿಕಟ ಸಂಪರ್ಕದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಇದರ ಆಧಾರದಲ್ಲಿಯೇ ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಹಲವರನ್ನು ಎನ್ ಐ ಎ ಬಂಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.…