ಬಿಎಸ್‌ವೈ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ ಬೊಮ್ಮಾಯಿ
ಬೆಂಗಳೂರು, ಸೆ.೫:ಬರುವ ಏಳರಂದು ಮುಖ್ಯಮಂತ್ರಿ ಬಸವಾರಾಜ್ ಬೊಮ್ಮಾಯಿ ದಹೆಲಿಗೆ ತೆರಳಿ ಮುಖಂಡರನ್ನು ಭೇಟಿ ಮಾಡುವ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಮಹತ್ವದ ಮಾತುಕತೆ ನಡೆಸಿದರು. ಈ ಬಾರಿ ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಕೆಲವು ಪ್ರಮುಖ ನಾಯಕರನ್ನು ಭೇಟಿಯಾಗಲಿರುವ ಬೊಮ್ಮಾಯಿ ಅವರು ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳ ಭರ್ತಿ, ನಿಗಮ-ಮಂಡಳಿಗಳಿಗೆ ನೇಮಕಾತಿ,ಕೆಲವು ಸಚಿವರ ಖಾತೆ ಬದಲಾವಣೆಯಂತಹ ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ.…