ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ;ಸಿದ್ದರಾಮಯ್ಯ ಕಳವಳ
ಬೆಂಗಳೂರು,ಸೆ,06:ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವುದು ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಕ್ರಮವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಲು ಕೈಗೊಂಡಿರುವ ತೀರ್ಮಾನ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ನೊಂದ…