ಪರಿಸರ ರಕ್ಷಣೆ ಮೂಲಕ ತೇಜಸ್ವಿ ನೆನಪಿಸಿಕೊಳ್ಳಬೇಕು; ಸಿದ್ದರಾಮಯ್ಯ
ಬೆಂಗಳೂರು, ಸೆ,08:ಪೂರ್ಣ ಚಂದ್ರ ತೇಜಸ್ವಿ ಒಬ್ಬ ಮಾನವತಾವಾದಿ ಅಲ್ಲದೆ ಪರಿಸರವಾದಿಯೂ ಕೂಡ ಆದರೆ ರಾಜಕಾರಣಿಗಳ ಬಗ್ಗೆ ಅವರಿಗೆ ವಿಶ್ವಾಸವಿರಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಅಂಗವಾಗಿ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿದ್ದ ತೇಜಸ್ವಿ ಜೀವಲೋಕ ಹಾಗೂ ಕುರಿಂಜಿ ಲೋಕ ಸಾಕ್ಷ್ಯಚಿತ್ರ, ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯ ನನಗಿರಲಿಲ್ಲ. ವಾರಕ್ಕೊಮ್ಮೆ ಮೈಸೂರಿಗೆ ಬರುತ್ತಿದ್ದರು, ಮೈಸೂರಿನಲ್ಲಿ ಕೆ. ರಾಮದಾಸ್ ಎನ್ನುವವರು ತೇಜಸ್ವಿಯವರ ಆಪ್ತ ಸ್ನೇಹಿತರಾಗಿದ್ದರು. ಇವರು…