ಪರಿಸರ ನಷ್ಟವನ್ನು ತುಂಬಲು ಪ್ರತಿ ವರ್ಷ ಪರಿಸರ ಆಯವ್ಯಯ:ಸಿ.ಎಂ. ಘೋಷಣೆ
ಬೆಂಗಳೂರು, ಸೆ, 11:ರಾಜ್ಯದಲ್ಲಿನ ಪರಿಸರ ಹಾನಿಯನ್ನು ತುಂಬಲು ಪರಿಸರ ಆಯವ್ಯಯವನ್ನು ಪ್ರಾರಂಭಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಹುತಾತ್ಮರಿಗೆ ನಮನ ಸಲ್ಲಿಸಿ ಮಾತನಾಡುತ್ತಿದ್ದರು. ಪ್ರತಿ ವರ್ಷ ರಾಜ್ಯದಲ್ಲಿ ನಾಶವಾಗಿರುವ ಒಟ್ಟು ಹಸಿರು ಪ್ರದೇಶ ಎಷ್ಟು ಎಂಬುದನ್ನು ಅಂದಾಜಿಸುವ ವಿಧಾನ ಪ್ರಾರಂಭಿಸಬೇಕು. ಆಗ ಹಸಿರಿನ ಕೊರತೆ ಎಷ್ಟು ಎಂದೂ ಸಹ ಗೊತ್ತಾಗುತ್ತದೆ. ಪರಿಸರ ಆಯವ್ಯಯವನ್ನು ಪ್ರಾರಂಭಿಸಿದಾಗ ಮಾತ್ರ ಈ ನಷ್ಟವನ್ನು ತುಂಬಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ಹೇಳಿದರು. ಅರಣ್ಯ ನಮಗಿಂತ ಮೊದಲು…