ಬೆಂಗಳೂರು ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ :ಸಿ.ಎಂ. ಬೊಮ್ಮಾಯಿ
ಬೆಂಗಳೂರು, ಸೆ, 12:ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ನೂತನವಾಗಿ 120 ನೂತನ ಆಂಬ್ಯುಲೆನ್ಸ್ ಗಳ ನ್ನು ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಬೆಂಗಳೂರು ಆರೋಗ್ಯ ಸೇವೆಗಳು ಸಂಪೂರ್ಣವಾಗಿ ಒಂದು ಪ್ರಾಧಿಕಾರದಡಿಗೆ ಬರಬೇಕು. ಬರುವ ದಿನಗಳಲ್ಲಿ ಇದನ್ನು ಕಾರ್ಯಗತಗೊಳಿಸುವುದಾಗಿ ಮುಖ್ಯಮಂತ್ರಿ ಗಳು ತಿಳಿಸಿದರು. ಆರೋಗ್ಯಕ್ಕೆ ಜೀವನಾಡಿ ಆಂಬ್ಯುಲೆನ್ಸ್ , ಆರೋಗ್ಯ ಯಾವಾಗ ಕೆಡುತ್ತದೆ ಎಂದು ತಿಳಿಯೋದು ಕಷ್ಟ. ಆರೋಗ್ಯ ಕೈಕೊಟ್ಟ…