Girl in a jacket

Daily Archives: September 14, 2021

ಸೆ. 17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ: 30 ಲಕ್ಷ ಲಸಿಕೆ ನೀಡುವ ಗುರಿ

ಬೆಂಗಳೂರು, ಸೆ, 14:ಸೆಪ್ಟೆಂಬರ್ 17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಿದ್ದು, ಈ ಕಾರ್ಯಕ್ರಮದಡಿ 30 ಲಕ್ಷ ಲಸಿಕೆ ಹಾಕಬೇಕು ಎಂದು ನಿರ್ಧರಿಸಲಾಗಿದೆ. ಅದಕ್ಕೆ ಸೂಕ್ತ ತಯಾರಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಬೃಹತ್ ಲಸಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಚುರುಕಾಗಿ ಸಾಗಿದ್ದು, ಉತ್ತರ ಪ್ರದೇಶದ ನಂತರ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.…

ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಹಲ್ಲೆ ಆರೋಪ

ವಿಜಯಪುರ,ಸೆ,೧೪: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ಸೋದರಳಿಯನ ಪತ್ನಿ ಮೇಲೆ ಹಲ್ಲೆ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದಿಂದಾಗಿ, ಅಕ್ಕನ ಪುತ್ರ ಫಯಾಜ್ ಕರಜಗಿ ಪರವಾಗಿ ನಿಂತು ರಾಜು ಅವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಫಯಾಜ್ ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ, ಬಲವಂತಾಗಿ ವಿಷ ಕುಡಿಸಿರುವ ಆರೋಪ ಮಾಡಲಾಗಿದ್ದು, ಪ್ರಸ್ತುತ ಸನಾ ಕರಜಗಿ(ಫಯಾಜ್ ಪತ್ನಿ) ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸನಾ ಕರಜಗಿ ಅವರ ತಾಯಿ ಫಾತಿಮಾ…

ಹೀಗಿರಲಿ ವಿದ್ಯೆ ಸೇವೆಗೆ ಮನ್ನಣೆ!

ಸಿದ್ಧಸೂಕ್ತಿ :              ಹೀಗಿರಲಿ ವಿದ್ಯೆ ಸೇವೆಗೆ ಮನ್ನಣೆ! ಬಹುತೇಕರು ನಾವು ಹೆಚ್ಚು ಬೆಲೆ ಕೊಡುವುದು ಹಣ ಆಸ್ತಿಗೆ. ಸುಳ್ಳು ಮೋಸ ಅಕ್ರಮದಿಂದ ಗಳಿಸುವೆವು! ಆದರ್ಶ ಮೌಲ್ಯ ಸಂಸ್ಕೃತಿ ಭಾವಗಳ ಕಡೆಗಣಿಸುವೆವು! ಸರಿದಾರಿಯಲಿ ಇಲ್ಲದಿದ್ದರೂ ಹಣ ಆಸ್ತಿಗರನು ಗೌರವಿಸುವೆವು,ಹಿಂಬಾಲಿಸುವೆವು! ಆದರ್ಶ ವಿದ್ಯೆ ಸಂಸ್ಕಾರವುಳ್ಳವರನು ನಿರ್ಲಕ್ಷ್ಯಿಸುವೆವು, ಅವಮಾನಿಸುವೆವು, ಗೌರವಿಸೆವು, ಪ್ರೋತ್ಸಾಹಿಸೆವು! ಪರಿಣಾಮ ಸಮಾಜದ ಮೇಲೆ ಕರಿ ನೆರಳು! ಮನೆ ಮನೆಯಲಿ ಹಣ ಆಸ್ತಿ ಲೆಕ್ಕಾಧಾರದ ಸಂಬಂಧ! ಕೆಟ್ಟ ಮೇಲೆ ಬುದ್ಧಿ!…

ವಿಚ್ಚೇದಿ ಪುತ್ರಿಗೆ ಅನುಕಂಪದದಾರಿತ ಉದ್ಯೋಗ ಇಲ್ಲ

ನವದೆಹಲಿ,ಸೆ,೧೪: ಸರ್ಕಾರಿ ನೌಕರರು ಮರಣ ಹೊಂದಿದ ಬಳಿಕ ಅವರ ಪುತ್ರಿ ವಿವಾಹ ವಿಚ್ಛೇದನ ಪಡೆದರೆ ಅಂಥ ಸಂದರ್ಭದಲ್ಲಿ ಅವರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆಕರ್ನಾಟಕಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ವೇಳೆ ಸರ್ವೋಚ್ಛ ನ್ಯಾಯಾಲಯ ಈ ಅಂಶವನ್ನು ಸ್ಪಷ್ಟಪಡಿಸಿದೆ. ಮಂಡ್ಯ ಜಿಲ್ಲಾ ಖಜಾನೆಯಲ್ಲಿ ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಿ. ಪಿ. ಭಾಗ್ಯಮ್ಮ ಅವರ ಪುತ್ರಿ ವಿ. ಸೌಮ್ಯಶ್ರೀ ಅವರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವಂತೆ ಕರ್ನಾಟಕ ಹೈಕೋರ್ಟ್ ನಿರ್ದೇಶನ…

Girl in a jacket