ರಾಜ್ಯದ ಪ್ರಮುಖ ಜಿಲ್ಲಾ ಕೇಂದ್ರಗಳಲ್ಲಿ ವಿಮಾನನಿಲ್ದಾಣ ಹಾಗೂ ಹ್ಯಾಲಿಪ್ಯಾಡ್ ನಿರ್ಮಾಣ
ಬೆಂಗಳೂರು, ಸೆ, 15-:ಸುಲಲಿತ ವ್ಯಾಪಾರೋದ್ಯಮಕ್ಕೆ ನೆರವಾಗುವಂತೆ ರಾಜ್ಯದ ಆಯ್ದ ಜಿಲ್ಲಾ ಕೇಂದ್ರಗಳಲ್ಲಿ ವಿಮಾನ ನಿಲ್ದಾಣಗಳನ್ನು ಪ್ರಾರಂಭಿಸುವ ಚಿಂತನೆ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮುರುಗೇಶ್ ನಿರಾಣಿ ತಿಳಿಸಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‍ಕೆಸಿಸಿಐ) ಆಯೋಜಿಸಿದ್ದ ಸಮಾರಂಭದಲ್ಲಿ ನಾನಾ ಪ್ರತಿಷ್ಠಿತ ಉದ್ಯಮದಾರರಿಗೆ `ರಫ್ತು ಶ್ರೇಷ್ಠತಾ ಪ್ರಶಸ್ತಿ’ ಪ್ರದಾನ ಮಾಡಿ ಮಂಗಳವಾರ ಅವರು ಮಾತನಾಡಿದರು. ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವ ಸಂಬಂಧ ಕೇಂದ್ರ ಸರಕಾರದೊಂದಿಗೆ ಮಾತುಕತೆ ನಡೆಸಿ, ಇದಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲೇ ನಡೆಸಲು…