ಪ್ರಧಾನಿಯವರಿಂದ ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತ: ಸಿಎಂ ಶ್ಲಾಘನೆ
ದಾವಣಗೆರೆ, ಸೆ, 19:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಕ್ಷರಶಃ ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತ ನೀಡುತ್ತಿದ್ದು, ದೇಶವನನ್ನು ಜೋಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡುತ್ತಿದ್ದರು. ದೇಶಕ್ಕಾಗಿ ತ್ಯಾಗ ಮಾಡಬೇಕೆಂನ್ನುವ ಮನೋಭಾವ ಸಂಪೂರ್ಣವಾಗಿ ಮರೆತು ಹೋಗಿರುವ ಸಂದರ್ಭದಲ್ಲಿ ಇಂದು ಶ್ರೀ ನರೇಂದ್ರ ಮೋದಿಯವರು ದೇಶ ಜೋಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ನಮ್ಮ ನಾಯಕರಾದ ಬಿ.ಎಸ್ ಯಡಿಯೂರಪ್ಪ ಅವರ…