ಕೃಷ್ಣಮೇಲ್ದಂಡೆ ಯೋಜನೆ ಹಿನ್ನೀರು ಮುಳುಗಡೆ ಜಮೀನು ಮಾರ್ಗಸೂಚಿ ಪರಷ್ಕರಿಸಲು ಮನವಿ
ಬೆಂಗಳೂರು,ಸೆ, 20:ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ 524.256ಮೀ ಹಿನ್ನೀರಿನಲ್ಲಿ ಮುಳುಗಡೆಯಾಗಲಿರುವ ತಾಲೂಕಿನ ಜಮೀನಿನ ಮಾರ್ಗಸೂಚಿ ಬೆಲೆಯನ್ನು ಪರಿಷ್ಕರಣೆ ಮಾಡಬೇಕು ಎಂದು ಬಬಲೇಶ್ವರ ತಾಲೂಕಿನ ರೈತರ ನಿಯೋಗ ಇಂದು ಕಂದಾಯ ಸಚಿವ ಆರ್.ಅಶೋಕ ಅವರಿಗೆ ಮನವಿ ಸಲ್ಲಿಸಿದರು. ಆಲಮಟ್ಟಿ ಆಣೆಕಟ್ಟು 524.256ಮೀ ಎತ್ತರಿಸಿ, ನೀರು ನಿಲ್ಲಿಸಿದಾಗ ಅಂದಾಜು 75 ಸಾವಿರ ಎಕರೆ ಪ್ರದೇಶದಷ್ಟು ಜಮೀನು ಮುಳುಗಡೆಯಾಗಲಿದ್ದು, ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳು ಮುಳುಗಡೆಯಾಗಲಿವೆ. ಈ ಹಿಂದೆ 2015-16ರಲ್ಲಿ ಮಾರ್ಗಸೂಚಿ ಬೆಲೆಯನ್ನು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ…